CinemaKarnatakaLatestLeading NewsMain PostSandalwood

ನಟಿ ರಂಭಾ ಕಾರು ಭೀಕರ ಅಪಘಾತ : ರಂಭಾ ಪುತ್ರಿಗೆ ತೀವ್ರ ಗಾಯ

ನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ನಟಿ ರಂಭಾ (Rambha) ಅವರ ಕಾರಿಗೆ ಭೀಕರ ಅಪಘಾತವಾಗಿದ್ದು (Car Accident)  ರಂಭಾ ಪುತ್ರಿ ಸಾಶಾ (Sasha) ತೀವ್ರ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ರಂಭಾಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಯ ನಂತರ ಅವರು ಮನೆಗೆ ವಾಪಸ್ಸಾಗಿದ್ದಾರೆ. ಆದರೆ, ಮಗಳಿಗೆ ಮಾತ್ರ ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ರಂಭಾ ಮತ್ತು ಪತಿ ಇಂದ್ರಕುಮಾರ್ ಪದ್ಮನಾಥನ್ (Indrakumar Padmanathan) ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊ (Toronto)ದಲ್ಲಿ ನೆಲೆಸಿದ್ದಾರೆ.  ಈ ದಂಪತಿಗೆ ಇಬ್ಬರು ಪುತ್ರಿಯರಿದ್ದು, ಓರ್ವ ಪುತ್ರನಿದ್ದಾನೆ. ಟೊರೊಂಟೊದಲ್ಲೇ ಅವರು ಮಕ್ಕಳಿಗೆ ಶಿಕ್ಷಣ ಕೂಡ ಕೊಡಿಸುತ್ತಿದ್ದಾರೆ. ಶಾಲೆ ಮುಗಿಸಿಕೊಂಡು ಮಕ್ಕಳನ್ನು ಕರೆತರುವಾಗ ಕಾರು ಅಪಘಾತಕ್ಕೀಡಾಗಿದೆ. ರಂಭಾ ಚಲಾಯಿಸುತ್ತಿದ್ದ ಕಾರು ಬಲ ಬದಿಯಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

ರಂಭಾ ಚಲಾಯಿಸುತ್ತಿದ್ದ ಕಾರಿನಲ್ಲಿ ಇಬ್ಬರು ಮಕ್ಕಳು ಮತ್ತು ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕೆಲಸದಾಕೆ ಇದ್ದರು ಎಂದು ಹೇಳಲಾಗುತ್ತಿದ್ದು, ಕಿರಿಯ ಪುತ್ರಿ ಸಾಶಾಗೆ ತೀವ್ರ ಗಾಯಗಳಾಗಿದ್ದು, ಉಳಿದಂತೆ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಈ ಎಲ್ಲ ವಿವರಗಳನ್ನು ಸ್ವತಃ ರಂಭಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button