ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್ ನಟಿ ರಮ್ಯಾ ಅವರು ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ರಮ್ಯಾ ಅವರು ಸಿನಿಮಾದಿಂದ ದೂರ ಉಳಿದುಕೊಂಡು ರಾಜಕಾರಣದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. 2003ರಲ್ಲಿ ತೆರೆಕಂಡ ಅಭಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ನೀಡಿದ ರಮ್ಯಾ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಸ್ಯಾಂಡಲ್‍ವುಡ್ ಕ್ವೀನ್ ಎಂಬ ಬಿರುದನ್ನು ಪಡೆದುಕೊಂಡಿದ್ದಾರೆ. ಬರೋಬ್ಬರಿ ಒಂದು ದಶಕ ರಮ್ಯಾ ಬೇಡಿಕೆಯ ನಟಿಯಾಗಿದ್ದರು. ರಾಜಕಾರಣದಲ್ಲಿ ಗುರುತಿಸಿಕೊಂಡ ಬಳಿಕ ಸಿನಿಮಾದಿಂದ ರಮ್ಯಾ ಅಂತರವನ್ನು ಕಾಯ್ದುಕೊಂಡಿದ್ದಾರೆ.
Advertisement
Advertisement
2013ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದೆಯಾಗಿ ಆಯ್ಕೆಯಾಗಿದ್ದರು. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎದುರು ಕಡಿಮೆ ಮತಗಳ ಅಂತರದಿಂದ ಸೋಲು ಕಂಡರು. ಇದಾದ ಬಳಿಕ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ರಮ್ಯಾ ಕಾರ್ಯನಿರ್ವಹಿಸುತ್ತಿದ್ದಾರೆ.
Advertisement
Advertisement
ಸದ್ಯ ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೋಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಟ ಅಂಬರೀಶ್ ಅವರ ಅಂತ್ಯಕ್ರಿಯೆಯಲ್ಲಿ ರಮ್ಯಾ ಅವರು ಭಾಗಿಯಾಗಲಿಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದರು.
2017ರಲ್ಲಿ ರಮ್ಯಾ ಅವರ ಹೆಸರಿನಲ್ಲಿ ಹುಟ್ಟುಹಬ್ಬದಂದು ಮಂಡ್ಯ ಜನರು ಅವರಿಗಾಗಿ ವಿಶೇಷ ಪೂಜೆ, ಪುನಸ್ಕಾರ ಮಾಡಿಸಿದ್ದರು. ರಮ್ಯಾ ಮಂಡ್ಯಕ್ಕೆ ಬರುತ್ತಾರೆಂದು ಸಾವಿರಾರು ಜನ ಕಾಯುತ್ತಿದ್ದರು. ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು, ರಾಜಕೀಯ ಬೆಂಬಲಿಗರು ಬ್ಯಾನರ್ ಹಾಕಿ ಶುಭಾಶಯವನ್ನು ಕೋರಿದ್ದರು. ಅಷ್ಟೇ ಅಲ್ಲದೇ ಅವರ ಭಾವಚಿತ್ರ ಇರುವ ಕ್ಯಾಲೆಂಡರ್ ಕೂಡ ಬಿಡುಗಡೆ ಮಾಡಿದ್ದರು. ಆದರೆ ರಮ್ಯಾ ಮಂಡ್ಯ ಜನತೆಯನ್ನು ಲೆಕ್ಕಿಸದೇ ಕಳೆದ ವರ್ಷ ದೆಹಲಿಯಲ್ಲಿ ದೋಸ್ತ್‍ಗಳ ಜೊತೆ ರಮ್ಯಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv