Bengaluru City
ಆಸ್ಪತ್ರೆಯಿಂದ ರಮ್ಯಾ ಡಿಸ್ಚಾರ್ಚ್

ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್, ಮಾಜಿ ಸಂಸದೆ ರಮ್ಯಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶನಿವಾರ ರಮ್ಯಾ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಫುಡ್ ಪಾಯಿಸನ್ ಆಗಿದ್ದರಿಂದ ರಮ್ಯಾರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಬೇರೆ ಯಾವ ರೀತಿಯ ಸಮಸ್ಯೆಯೂ ಇಲ್ಲ. ಸದ್ಯ ಚೇತರಿಸಿಕೊಂಡಿದ್ದಾರೆ.
ರಮ್ಯಾ ಅವರಿಗೆ ಅವಶ್ಯಕ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗಿದೆ. ರಮ್ಯಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಧೀರಜ್ ಕಾರಂತ್ ಹೇಳಿದ್ದಾರೆ
