ಮೋಹಕ ತಾರೆ ರಮ್ಯಾ (Ramya) ಮದುವೆ (Wedding) ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಹಲವಾರು ಬಾರಿ ರಮ್ಯಾ ಮದುವೆ ವಿಚಾರ ಹಾಟ್ ಟಾಪಿಕ್ ಕೂಡ ಆಗಿದೆ. ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಯಾವುದೇ ಕಾರ್ಯಕ್ರಮಕ್ಕೆ ಹೋಗಲಿ ಅಲ್ಲಿ ಮದುವೆ ವಿಷಯ ಪ್ರಸ್ತಾಪ ಆಗಿಯೇ ಆಗತ್ತೆ. ಈ ವೀಕೆಂಡ್ ನಲ್ಲೂ ರಮ್ಯಾ ಮದುವೆ ವಿಷ್ಯ ಬ್ರೇಕಿಂಗ್ ಆಗಿತ್ತು.
Advertisement
ರಾಜಸ್ಥಾನ ಮೂಲದ ಟೆಕ್ಸ್‌ಟೈಲ್ ಉದ್ಯಮಿ (Businessman) ಜೊತೆ ರಮ್ಯಾ ನಿಶ್ಚಿತಾರ್ಥ ಆಗಿದೆ ಅನ್ನೋ ವಿಚಾರ ಗಾಂದಿನಗರದ ಗಲ್ಲಿಗಲ್ಲಿಗಳಲ್ಲಿ ಇವತ್ತು ಕೇಳಿ ಬಂತು. ಆಪ್ತರು ಹೇಳುವಂತೆ ಅಕ್ಟೋಬರ್ ನಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರಂತೆ. ನವೆಂಬರ್‌ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮದುವೆ ನಡೆಯಲಿದೆ. ರಾಜಸ್ಥಾನದ ಲ್ಲಿ ಆರತಕ್ಷತೆ ನಡೆಲಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಇದನ್ನು ಅವರ ಆಪ್ತರು ಕೂಡ ಖಚಿತ ಪಡಿಸಿದ್ದಾರೆ. ಇದನ್ನೂ ಓದಿ:ಕುಡಿದು ರಂಪಾಟ – ʻಜೈಲರ್ʼ ಸಿನಿಮಾ ವಿಲನ್ ವಿನಾಯಕನ್ ಅರೆಸ್ಟ್!
Advertisement
Advertisement
ಉದ್ಯಮಿ ಜೊತೆ ಮದುವೆ ಆಗೋದು ಪಕ್ಕಾ, ಇಂದು ಉದ್ಯಮಿ ಕುಟುಂಬದ ಕಾರ್ಯಕ್ರಮದಲ್ಲಿ ರಮ್ಯಾ ಭಾಗಿ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಇವರ ನಿಶ್ಚಿತಾರ್ಥ ನಡೆಯಲಿದೆ. ಹಾಗೂ ರಮ್ಯಾರ ಹುಟ್ಟು ಹಬ್ಬದ ದಿನದಂದೇ (ನ.29) ಈ ಜೋಡಿ ಹೊಸ ಬದುಕಿಗೆ ಕಾಲಿಡಲಿದೆ ಎಂದು ಅಂತ ಸುದ್ಧಿ ಅಪ್‌ಡೇಟ್ ಆಗಿತ್ತು.
Advertisement
ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ರಮ್ಯಾ, ಇದೊಂದು ರೂಮರ್ಸ್ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ. ಹಲವಾರು ಬಾರಿಯೂ ಮದುವೆ ಸುದ್ದಿ ಬಂದಾಗ ಅದನ್ನು ರಮ್ಯಾ ಅಲ್ಲಗಳೆಯುತ್ತಲೇ ಬಂದಿದ್ದಾರೆ. ಎಂದಿನಂತೆ ಈ ಬಾರಿಯೂ ಅದನ್ನೇ ಮಾಡಿದ್ದಾರೆ.