ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ ಅವರು ರಶ್ಮಿಕಾ ಪರ ಬ್ಯಾಟಿಂಗ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣಗೆ ಬುದ್ಧಿ ಕಲಿಸಬೇಕು ಎಂದ ಶಾಸಕ ರವಿ ಗಣಿಗ ಹೇಳಿಕೆಗೆ ತಿರುಗೇಟು ರಮ್ಯಾ ನೀಡಿದ್ದಾರೆ. ಇದನ್ನೂ ಓದಿ:ಮಹಿಳಾ ಕಲಾವಿದರಿಗೂ ಆದ್ಯತೆ ಕೊಡಬೇಕು: ನಟಿಯರ ಸಂಭಾವನೆ ಬಗ್ಗೆ ರಮ್ಯಾ ಬೇಸರ
ಫಿಲ್ಮ್ ಫೆಸ್ಟಿವಲ್‌ನಲ್ಲಿ ಮಾತನಾಡಿದ ರಮ್ಯಾ, ರಶ್ಮಿಕಾರನ್ನ ಪ್ರಾರಂಭದ ದಿನಗಳಿಂದಲೂ ಟ್ರೋಲ್ ಮಾಡ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಶ್ಮಿಕಾ ಹೈದರಾಬಾದ್‌ನಲ್ಲಿ ಮನೆಯನ್ನ ಮಾಡಿರಬಹುದು. ಅದಕ್ಕೆ ಹಾಗೆ ಹೇಳಿರಬಹುದು ಅಂತಾ ರಶ್ಮಿಕಾ ಪರ ರಮ್ಯಾ ಬ್ಯಾಟಿಂಗ್ ಮಾಡಿದ್ದಾರೆ.
ಅಂದಹಾಗೆ, ವಿಧಾನಸೌಧ ಶಾಸಕ ಗಣಿಗ ರವಿ ಅವರು ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್‌ನಲ್ಲಿ ಇರೋದು, ನನಗೆ ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು. ಹಾಗಾಗಿ ಈ ವಿಚಾರಕ್ಕೆ ರಶ್ಮಿಕಾ ಮಂದಣ್ಣ ಪರ ರಮ್ಯಾ ಮಾತನಾಡಿದ್ದಾರೆ.