ಕನ್ನಡ ಸಿನಿಮಾ (Sandalwood) ರಂಗಕ್ಕೆ ನಿರ್ಮಾಪಕಿಯಾಗಿ ಮತ್ತೆ ಕಮ್ ಬ್ಯಾಕ್ ಮಾಡಿರುವ ನಟಿ ರಮ್ಯಾ (Ramya) , ಮೊನ್ನೆಯಷ್ಟೇ ತಮ್ಮ ಸಂಸ್ಥೆಯ ಹೆಸರನ್ನು ಅನೌನ್ಸ್ ಮಾಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದರು. ತಮ್ಮ ಆ್ಯಪಲ್ ಬಾಕ್ಸ್ (Apple Box) ಸಿನಿಮಾ ಸಂಸ್ಥೆಯಿಂದ ಹಲವಾರು ಚಿತ್ರಗಳನ್ನು ಮತ್ತೆ ವೆಬ್ ಸೀರಿಸ್ ಮಾಡುವುದಾಗಿಯೂ ಘೋಷಣೆ ಮಾಡಿದ್ದರು. ಸದ್ಯದಲ್ಲೇ ಪ್ರಥಮ ಸಿನಿಮಾ ಘೋಷಣೆಯ ವಿಚಾರವನ್ನೂ ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಗುಡ್ ನ್ಯೂಸ್ ಕೊಡಲು ಅವರು ಮುಂದಾಗಿದ್ದಾರೆ.
ಕಾಂತಾರ ಸಿನಿಮಾ ನೋಡಲು ಬಂದಿದ್ದ ರಮ್ಯಾ, ಮಾಧ್ಯಮಗಳ ಜೊತೆ ಮಾತನಾಡುತ್ತಾ, ದಸರಾ ಹಬ್ಬಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡುವುದಾಗಿ ತಿಳಿಸಿದರು. ಅಕ್ಟೋಬರ್ 5 ರಂದು ಆ ಸುದ್ದಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ. ಬಹುಶಃ ಅವರ ಸಂಸ್ಥೆಯ ಚೊಚ್ಚಲು ಸಿನಿಮಾದ ಬಗ್ಗೆ ಮಾಹಿತಿ ನೀಡಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ನಟಿ ಸಮಂತಾ ಆರೋಗ್ಯದ ಬಗ್ಗೆ ಮತ್ತೆ ಆತಂಕ: ‘ಶಾಕುಂತಲಾ’ ಸಿನಿಮಾ ರಿಲೀಸ್ ಮುಂದಕ್ಕೆ
ರಮ್ಯಾ ಅವರ ನಿರ್ಮಾಣ ಸಂಸ್ಥೆಯಿಂದ ಪ್ರಥಮ ಚಿತ್ರವಾಗಿ ರಾಜ್ ಬಿ ಶೆಟ್ಟಿ (Raj B Shetty) ನಿರ್ದೇಶನದ ಸಿನಿಮಾ ಬರಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜ್ ಬಿ ಶೆಟ್ಟಿ ಮತ್ತು ರಮ್ಯಾ ಅವರು ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ ಎನ್ನಲಾಗುತ್ತಿದೆ. ಪ್ರಥಮ ಚಿತ್ರವಾಗಿ ಅದೇ ನಿರ್ಮಾಣಗೊಳ್ಳಬಹುದಂತೆ. ಬಹುಶಃ ಇದೇ ಸಿನಿಮಾ ಸಮಾಚಾರವನ್ನು ಅವರು ಅಕ್ಟೋಬರ್ 5 (October 5) ರಂದು ತಿಳಿಸಲಿದ್ದಾರಾ ಎನ್ನುವುದನ್ನು ಕಾದು ನೋಡಬೇಕು.