ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ (Gold Smuggling Case) ಸಿಲುಕಿ ಜೈಲು ಪಾಲಾಗಿರೋ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ (Ranya Rao) ಪತಿ ಜತೀನ್ ಹುಕ್ಕೇರಿ ಶಾಕ್ ಕೊಟ್ಟಿದ್ದಾರೆ.
ಈಗಾಗಲೇ ವೈವಾಹಿಕ ಜೀವನದಲ್ಲಿ ಸಾಕಷ್ಟು ಜಗಳ ಆಗಿದೆ ಮನಸ್ತಾಪಗಳು ಇದ್ದಾವೆ ಅಂತ ಹೇಳಿಕೊಂಡಿದ್ದ ಜತೀನ್ ಹುಕ್ಕೇರಿ ಈಗ ವಿಚ್ಚೇದನಕ್ಕೆ ಮೊರೆ ಹೋಗಿದ್ದಾರೆ. ಫ್ಯಾಮಿಲಿ ಕೋರ್ಟ್‌ನಲ್ಲಿ (Family Court) ವಿಚ್ಚೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು, ಇನ್ನೂ ಕೂಡ ಕೋರ್ಟ್ ನಂಬರಿಂಗ್ ಆಗಿಲ್ಲ. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ
- Advertisement
ಬಳ್ಳಾರಿ ಮೂಲದ ಸಾಹಿಲ್‌ಗೆ ಜೈಲೇ ಗತಿ:
ಇನ್ನೂ ಈ ಪ್ರಕರಣದ ಮೂರನೇ ಆರೋಪಿ ಸಾಹಿಲ್ ಜೈನ್‌ಗೂ (Sahil Jain) ಜೈಲೇ ಗತಿಯಾಗಿದೆ. ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ನೀಡಿದೆ. ಇದನ್ನೂ ಓದಿ: ರನ್ಯಾ ಕೇಸ್ – ಗೌರವ್ ಗುಪ್ತಾ ಮಧ್ಯಂತರ ವರದಿ ಕೊಟ್ಟಿರಬಹುದು: ಪರಮೇಶ್ವರ್
- Advertisement
ಬಳ್ಳಾರಿ (Ballari) ಮೂಲದ ಸಾಹಿಲ್ ಜೈನ್ ರನ್ಯಾ ರಾವ್ ಜೊತೆಗೆ ವಾಟ್ಸಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಲಾಕ್ ಆಗಿದ್ದ. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಅಂಗಡಿ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ ಸಾಹಿಲ್ ಜೈನ್ ಕುಟುಂಬ ಬೆಂಗಳೂರಿಗೆ ಶಿಫ್ಟ್ ಆಗಿದೆ. ಇದನ್ನೂ ಓದಿ: Exclusive | ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಮೊದಲು ಚಿನ್ನ ಸಾಗಿಸಿದ್ದು ದಕ್ಷಿಣಾ ಆಫ್ರಿಕಾದಿಂದ ದುಬೈಗೆ!
ಸಾಹಿಲ್ ಚಿಕ್ಕಂದಿನಿಂದಲೇ ಸೋದರ ಮಾವನ ಜೊತೆಯಲ್ಲಿ ಮುಂಬೈನಲ್ಲಿ ವಾಸ ಮಾಡುತ್ತಿದ್ದ. ಈಗಾಗಲೇ ಇದೇ ರೀತಿಯ ಪ್ರಕರಣದಲ್ಲಿ ಸಾಹಿಲ್ ಮುಂಬೈನಲ್ಲಿ ಒಮ್ಮೆ ಬಂಧನಕ್ಕೆ ಒಳಗಾಗಿದ್ದ. ಕಸ್ಟಮ್ಸ್ ಅಧಿಕಾರಿಗಳು ಮುಂಬೈ ಏರ್ಪೋರ್ಟ್‌ನಲ್ಲಿ ಬಂಧಿಸಿದ್ದರು. ಈಗಿನ ಪ್ರಕರಣ ಮತ್ತು ಹಿಂದಿನ ಪ್ರಕರಣದಲ್ಲಿ ಚಿನ್ನವನ್ನು ಮಾರಾಟ ಮಾಡುತ್ತಿದ್ದ ಹಾಗೂ ಹವಾಲಾ ನಂಟಿನ ಆರೋಪದಲ್ಲಿಯೇ ಸಾಹಿಲ್ ಜೈನ್ ಬಂಧಿತನಾಗಿದ್ದ. ಚಿನ್ನದ ವ್ಯಾಪಾರಿಗಳ ಜೊತೆ ನಂಟು ಇರೋ ಹಿನ್ನೆಲೆ ಚಿನ್ನದ ಮಾರಾಟದ ಜವಾಬ್ದಾರಿಯೂ ಸಾಹಿಲ್ ಮೇಲಿತ್ತು. ಬಂಧನದ ಬಳಿಕ ಸಾಹಿಲ್ ಜೈನ್‌ನನ್ನ ಡಿಆರ್‌ಐ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿ 7 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಇಂದು ಕಸ್ಟಡಿ ಅವಧಿ ಮುಕ್ತಾಯಗೊಂಡ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.