ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ 2’ (Pushpa 2) ಸಕ್ಸಸ್ ನಂತರ ಮತ್ತೊಂದು ಬಿಗ್ ಬಜೆಟ್ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಐತಿಹಾಸಿಕ ಸಿನಿಮಾದಲ್ಲಿ ಮಹಾರಾಣಿಯ ಪಾತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡಿದೆ. ಇದನ್ನೂ ಓದಿ:ಹನುಮಂತ ಆ ಹುಡುಗಿಯ ಮನಸ್ಸನ್ನು ಗೆದ್ದಿದ್ದಾನೆ: ಗೆಳೆಯನ ಮದುವೆ ಬಗ್ಗೆ ಧನರಾಜ್ ಮಾತು
ಬಾಲಿವುಡ್ ನಟ ವಿಕ್ಕಿ ಕೌಶಲ್ ನಟನೆಯ ‘ಛಾವಾ’ (Chhaava) ಸಿನಿಮಾದಲ್ಲಿ ವಿಕ್ಕಿಗೆ ಜೋಡಿಯಾಗಿ ರಶ್ಮಿಕಾ ಮಿಂಚಿದ್ದಾರೆ. ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ನಟಿ ಕಂಗೊಳಿಸಿದ್ದಾರೆ. ನಟಿಯ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಚಿತ್ರವನ್ನು ಲಕ್ಷö್ಮಣ್ ಉತ್ತೇಕರ್ ಅವರು ನಿರ್ದೇಶನ ಮಾಡಿದ್ದಾರೆ.
ಜ.22ರಂದು ‘ಛಾವಾ’ ಸಿನಿಮಾ ಮೊದಲ ಟ್ರೇಲರ್ ರಿಲೀಸ್ ಆಗಲಿದೆ. ವಿಕ್ಕಿ ಕೌಶಲ್ (Vicky Kaushal) ಮತ್ತು ರಶ್ಮಿಕಾ ಕಾಂಬಿನೇಷನ್‌ನ ಐತಿಹಾಸಿಕ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
ಇನ್ನೂ ಅಲ್ಲು ಅರ್ಜುನ್ (Allu Arjun) ಜೊತೆ ನಟಿಸಿದ ‘ಪುಷ್ಪ 2’ ಚಿತ್ರ ರಶ್ಮಿಕಾ ಬಿಗ್ ಸಕ್ಸಸ್ ಕೊಟ್ಟಿದೆ. 1800 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.