ಬಾಲಿವುಡ್ ಮತ್ತು ಟಾಲಿವುಡ್ ಎಲ್ಲೆಲ್ಲೂ ರಶ್ಮಿಕಾ ಮಂದಣ್ಣ (Rashmika Mandanna) ಹೆಸರು ರಾರಾಜಿಸುತ್ತಿದೆ. ‘ಅನಿಮಲ್’ (Animal Film) ಚಿತ್ರದ ಸಕ್ಸಸ್ ನಂತರ ಹೊಸ ಸಿನಿಮಾದಲ್ಲಿ ನಟಿಸೋಕೆ ರೆಡಿಯಾಗಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿಗೆ ‘ಗರ್ಲ್‌ಫ್ರೆಂಡ್’ ಆಗಿ ರಶ್ಮಿಕಾ ಬಣ್ಣ ಹಚ್ತಿದ್ದಾರೆ.
‘ಅನಿಮಲ್’ (Animal) ಸಿನಿಮಾ 500 ಕೋಟಿ ರೂ. ಕ್ಲಬ್ ಮಾಡುತ್ತ ಮುನ್ನುಗ್ಗುತ್ತಿದೆ. ಬಾಲಿವುಡ್‌ನಲ್ಲಿ ಅದೃಷ್ಟ ಖುಲಾಯಿಸುತ್ತಿದ್ದಂತೆ ಗರ್ಲ್‌ಫ್ರೆಂಡ್ ಆಗೋಕೆ ಸಜ್ಜಾಗಿದ್ದಾರೆ. ಗೀತಾ ಆರ್ಟ್ಸ್ ಬ್ಯಾನರ್‌ನ ರೂವಾರಿ ಅಲ್ಲು ಅರವಿಂದ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ ದಿ ಗರ್ಲ್‌ಫ್ರೆಂಡ್’ (The Girlfriend) ಎಂಬ ಮಹಿಳಾ ಪ್ರಧಾನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:Bigg Boss Telugu 7: ಶೋನಲ್ಲಿ ಕನ್ನಡ ಮಾತನಾಡಿದ ಪಟಾಕಿ ಪೋರ
ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ಬರಹಗಾರ ರಾಹುಲ್ ರವಿಂದ್ರನ್ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾಗೆ ಹೀರೋ ಆಗಿ ದೀಕ್ಷಿತ್ ಶೆಟ್ಟಿ ನಟಿಸುತ್ತಿದ್ದಾರೆ. ಮೊದಲ ದಿನದ ಶೂಟಿಂಗ್‌ನಲ್ಲಿ ರಶ್ಮಿಕಾ ಜೊತೆ ದೀಕ್ಷಿತ್ ಶೆಟ್ಟಿ ಕೂಡ ಭಾಗಿಯಾಗಿದ್ದು, ಚಿತ್ರೀಕರಣ ಭರದಿಂದ ಸಾಗುತ್ತಿದೆ. ರಶ್ಮಿಕಾ- ದೀಕ್ಷಿತ್ (Dheekshith Shetty) ಇಬ್ಬರ ಪಾತ್ರಕ್ಕೂ ಬಹಳಷ್ಟು ಪ್ರಾಮುಖ್ಯತೆ ಇದ್ದು, ಈ ಹೊಸ ಜೋಡಿ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಎಂಬುದರ ಬಗ್ಗೆ ಈಗಾಗಲೇ ಕೌತುಕ ನಿರ್ಮಾಣ ಮಾಡಿದೆ.
ರಶ್ಮಿಕಾ ಪಾತ್ರದ ಸುತ್ತ ಸುತ್ತುವ ಈ ಕಥೆಗಾಗಿ ನಟಿ ಮಾರ್ಷಲ್ ಆರ್ಟ್ಸ್ ಕಲಿಯುತ್ತಿದ್ದಾರೆ. ಚಿತ್ರದಲ್ಲಿ ಅವರಿಗೆ ಫೈಟಿಂಗ್ ಸೀನ್ಸ್ ಕೂಡ ಇದೆ. ಮೊದಲ 20 ದಿನದ ಶೂಟಿಂಗ್‌ನಲ್ಲಿ ಸಾಕಷ್ಟು ಆ್ಯಕ್ಷನ್ ದೃಶ್ಯಗಳ ಶೂಟ್ ಮಾಡಲಾಗುತ್ತಿದೆ. ರಶ್ಮಿಕಾ ಮಂದಣ್ಣ ಅವರನ್ನ ಸಾಹಸ ದೃಶ್ಯಗಳಲ್ಲಿಯೂ ಕಣ್ತುಂಬಿಕೊಳ್ಳಬಹುದು. ಸದ್ಯದಲ್ಲೇ ಈ ಸಿನಿಮಾದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.