ಬೆಂಗಳೂರು: ಸ್ಯಾಂಡಲ್ವುಡ್ ಕ್ರಷ್, ಕಿರಿಕ್ ರಾಣಿ ರಶ್ಮಿಕಾ ಮಂದಣ್ಣ ಮತ್ತು ಕುಟುಂಬಸ್ಥರಿಗೆ ಐಟಿ ಸಮನ್ಸ್ ನೀಡಿದೆ.
ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕಿರಿಕ್ ಬೆಡಗಿ ಮನೆಯಲ್ಲಿ ಐಟಿ ಬೇಟೆ – ದಾಳಿ ವೇಳೆ ಸಿಕ್ಕಿದ್ದು 25 ಲಕ್ಷ ಕ್ಯಾಶ್
Advertisement
ಐಟಿ ಅಧಿಕಾರಿಗಳು ರಶ್ಮಿಕಾ ಮನೆಯಲ್ಲಿ ಸತತ ಎರಡು ದಿನಗಳ ಕಾಲ ದಾಳಿ ನಡೆಸಿ ಸಾಕಷ್ಟು ಮಾಹಿತಿ ಕಲೆ ಹಾಕಿದ್ದರು. ಜೊತೆಗೆ ದಾಖಲೆ ಇಲ್ಲದ 25 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತೆರಿಗೆ ವಂಚನೆ ಮಾಡಿರುವ ಕೋಟ್ಯಂತರ ಆಸ್ತಿಯ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ನನ್ನ ಅಕೌಂಟ್ನಲ್ಲಿ ದುಡ್ಡೇ ಇಲ್ಲ ಎಂದಿದ್ದ 5 ದಿನದಲ್ಲೇ ರಶ್ಮಿಕಾಗೆ ಐಟಿ ಶಾಕ್
Advertisement
Advertisement
ಈ ಎಲ್ಲಾ ಮಾಹಿತಿಯ ಆಧಾರದ ಮೇಲೆ ಐಟಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
Advertisement
ದಾಳಿ ವೇಳೆ ರಶ್ಮಿಕಾ ಮನೆಯಲ್ಲಿ 3.94 ಕೋಟಿ ರೂ. ಮೊತ್ತದ ಅಘೋಷಿತ ಆದಾಯ ಪತ್ತೆಯಾಗಿದೆ. 1.5 ಕೋಟಿ ರೂಪಾಯಿಗೆ ತೆರಿಗೆ ಕಟ್ಟಿಲ್ಲ. ಇಷ್ಟು ಮಾತ್ರವಲ್ಲದೆ ರಶ್ಮಿಕಾ ಹೆಸರಲ್ಲಿ ಎರಡು ಪ್ಯಾನ್ ಕಾರ್ಡ್ ಇರುವುದು ಕೂಡ ಬೆಳಕಿಗೆ ಬಂದಿದೆ. ಒಂದು ಪ್ಯಾನ್ ಕಾರ್ಡ್ ಮೂಲಕ 2016-17ರವರೆಗಷ್ಟೇ ಆದಾಯ ತೆರಿಗೆ ಸಲ್ಲಿಕೆ ಮಾಡಲಾಗಿದೆ. ರಶ್ಮಿಕಾ ತಂದೆ ಒಡೆತನದ ಕಲ್ಯಾಣ ಮಂಟಪದ ಬಗ್ಗೆಯೂ ಗುಮಾನಿಯಿದ್ದು, ಕಲ್ಯಾಣ ಮಂಟಪದ ವ್ಯವಹಾರದ ಬಗ್ಗೆಯೂ ಕೆಲ ಮಾಹಿತಿ ಮುಚ್ಚಿಟ್ಟ ಆರೋಪ ಕೇಳಿ ಬಂದಿದೆ.
ಐಟಿ ದಾಳಿ:
ಗುರುವಾರ ಮುಂಜಾನೆ 7:30ಕ್ಕೆ ರಶ್ಮಿಕಾ ಅಭಿಮಾನಿಗಳು ಎಂದು ಎಂಟ್ರಿ ಕೊಟ್ಟಿದ್ದ ಆಂಧ್ರಪ್ರದೇಶದ ಐಟಿ ಅಧಿಕಾರಿಗಳು, ಮನೆಯನ್ನು ಜಾಲಾಡಿ ದಾಖಲೆಗಳನ್ನು ಕಲೆಹಾಕಿದ್ದರು. ರಶ್ಮಿಕಾ ಮಂದಣ್ಣ ತಂದೆ ಒಡೆತನದ ಬೃಹತ್ ಬಂಗಲೆ, ಸೆರೆನಿಟಿ ಕಲ್ಯಾಣ ಮಂಟಪ, ಕಾಫಿ ತೋಟ, ಹೊಸದಾಗಿ ಖರೀದಿ ಮಾಡಿ ಬಿಟ್ಟಂಗಾಲದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿದ್ದ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್, ಪೆಟ್ರೋಲ್ ಬಂಕ್ ಜಾಗದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದರು.
ಸತತ 29 ಗಂಟೆಗಳ ಬಳಿಕ ಐಟಿ ಅಧಿಕಾರಿಗಳ ತಲಾಶ್ ಬಳಿಕ 1 ಸೂಟ್ಕೇಸ್, 3 ಹ್ಯಾಂಡ್ ಬ್ಯಾಗ್, 1 ಬಾಕ್ಸ್ ನಲ್ಲಿ ಮಂದಣ್ಣ ಮನೆಯಲ್ಲಿ ಸಿಕ್ಕ ದಾಖಲೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ.