ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚ್ತಿದ್ದಾರೆ. ಸದ್ಯ ಬಾಲಿವುಡ್‌ನ ‘ಅನಿಮಲ್’ (Animal) ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮ ತಂಡದ ಜೊತೆ ನಟಿ ಬೆಂಗಳೂರಿಗೆ ಬಂದಿದ್ದು, ಸಿನಿಮಾ ಬಗ್ಗೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಮತ್ತೆ ಕನ್ನಡ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಾರಾ? ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಅನಿಮಲ್’ ಚಿತ್ರದಲ್ಲಿ ರಣ್‌ಬೀರ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಕನ್ನಡ, ಹಿಂದಿ, ತೆಲುಗು ಮೂರು ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ. ಚಿತ್ರದಲ್ಲಿ ರಣ್‌ಬೀರ್- ರಶ್ಮಿಕಾ ಜೋಡಿಯ ಆರು ಲಿಪ್ ಲಾಸ್ ಸೀನ್‌ಗಳಿವೆ.
ಈಗಾಗಲೇ ಚಿತ್ರದ ಟ್ರೈಲರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಬಹುಭಾಷೆಗಳಲ್ಲಿ ಡಿಸೆಂಬರ್ 1ಕ್ಕೆ ರಿಲೀಸ್ ಆಗುತ್ತಿದೆ. ‘ಅನಿಮಲ್’ ಚಿತ್ರ ನೋಡಲು ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.


