ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ‘ಪುಷ್ಪ 2’ (Pushpa 2) ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪುಷ್ಪರಾಜ್‌ಗೆ ಜೋಡಿಯಾಗಿರುವ ಶ್ರೀವಲ್ಲಿ ಲುಕ್ ಹೇಗಿದೆ ಎಂಬುದು ಈಗ ರಿವೀಲ್ ಆಗಿದೆ. ಪುಷ್ಪ 2 ಚಿತ್ರೀಕರಣದ ಫೋಟೋ ಲೀಕ್ ಆಗಿದೆ. ರಶ್ಮಿಕಾ ಮಂದಣ್ಣ ನಟಿಸುತ್ತಿರೋ ಶ್ರೀವಲ್ಲಿ ಲುಕ್ ಔಟ್ ಆಗಿದೆ.
ಅಲ್ಲು ಅರ್ಜುನ್ (Allu Arjun), ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಸಕ್ಸಸ್ ಆಗಿ ಕೋಟಿ ಕೋಟಿ ಲೂಟಿ ಮಾಡಿದೆ. ಹಾಗಾಗಿ ‘ಪುಷ್ಪ 2’ (Pushpa 2) ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ‘ಪುಷ್ಪ’ ಪಾರ್ಟ್ 2 ಹೇಗೆ ಮೂಡಿ ಬರಲಿದೆ ಎಂದು ಕೌತುಕ ಸೃಷ್ಟಿಸಿರುವಾಗಲೇ ಚಿತ್ರದಲ್ಲಿನ ಶ್ರೀವಲ್ಲಿ ಲುಕ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Wooohoooooo
Here is Srivalli's 1st look
Now the excitement to watch this film has increased further.
Teri Jhalak Asharfi @iamRashmika ????❤️#RashmikaMandanna ❤️pic.twitter.com/EsZEfMcXkS
— Rashmika Delhi Fans (@Rashmikadelhifc) March 19, 2024
ನಟಿ ರಶ್ಮಿಕಾ ಮಂದಣ್ಣ ಕೆಂಪು ಬಣ್ಣದ ಸೀರೆ, ಆಭರಣ ಧರಿಸಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣದ ಸೆಟ್‌ನಲ್ಲಿ ನಟಿಯನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಈ ವಿಡಿಯೋ ಇದೀಗ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದೆ. ಇದನ್ನೂ ಓದಿ:ಚಿತ್ರೀಕರಣಕ್ಕೂ ಮುನ್ನ ‘ಕಾಂತಾರ 1’ ಚಿತ್ರ ಸೋಲ್ಡ್ ಔಟ್
ಇನ್ನೂ ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದೇ ಆಗಸ್ಟ್ 15ಕ್ಕೆ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಅಲ್ಲು ಅರ್ಜುನ್ ನ್ಯೂ ಗೆಟಪ್ ನೋಡೋಕೆ ಫ್ಯಾನ್ಸ್ ಎದುರು ನೋಡ್ತಿದ್ದಾರೆ.