ಬೆಂಗಳೂರು: ಚಿಕ್ಕವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ವಿಚಾರವಾಗಿ ನಟಿ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.
Advertisement
ವೈಯಕ್ತಿಕ ವಿಚಾರವಾಗಿ ಆಗಾಗ ಸುದ್ದಿಯಲ್ಲಿ ಇರುವ ರಶ್ಮಿಕಾ ಯಾರನ್ನಾದರೂ ಲವ್ ಮಾಡುತ್ತಿದ್ದಾರಾ? ಈ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಿದೆ. ಕೆಲವು ಸಂದರ್ಶನಗಳಲ್ಲೂ ಅವರಿಗೆ ರಿಲೇಷನ್‍ಶಿಪ್ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಇತ್ತೀಚೆಗೆ ಡೇಟಿಂಗ್ ಕುರಿತ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ.
Advertisement
Advertisement
ರಶ್ಮಿಕಾ ಮಂದಣ್ಣ ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸಲಾಯಿತು. ಅದಕ್ಕೆ ಬುದ್ಧಿವಂತಿಕೆಯಿಂದ ಅವರು ಉತ್ತರ ನೀಡಿದ್ದಾರೆ. ವಯಸ್ಸು ಮುಖ್ಯವಾಗುವುದಿಲ್ಲ. ವ್ಯಕ್ತಿ ಮುಖ್ಯವಾಗುತ್ತಾರೆ ಎಂದು ರಶ್ಮಿಕಾ ಹೇಳಿದ್ದಾರೆ. ಈ ಜಾಣತನದ ಉತ್ತರಕ್ಕೆ ಅವರ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಲಸಿಕೆ ಹಾಕಿಸಿಕೊಂಡರೆ ವಾಷಿಂಗ್ ಮಶಿನ್, ಫ್ರಿಡ್ಜ್, ಟಿವಿ ಬಹುಮಾನ
Advertisement
ರಶ್ಮಿಕಾ ಮಂದಣ್ಣ ಈಗ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಸ್ಟಾರ್ ನಟರ ಸಿನಿಮಾಗಳಿಗೆ ಅವರೇ ನಾಯಕಿ ಆಗಬೇಕು ಎನ್ನುವ ಬೇಡಿಕೆ ದಿನದಿಂದದಿನಕ್ಕೆ ಹೆಚ್ಚಾಗುತ್ತಿದೆ. ತೆಲುಗು, ತಮಿಳು ಮಾತ್ರವಲ್ಲದೇ ಹಿಂದಿಯಲ್ಲೂ ಅವರ ಹವಾ ಹೆಚ್ಚಿದೆ. ಅಮಿತಾಭ್ ಬಚ್ಚನ್, ಸಿದ್ದಾರ್ಥ್ ಮಲ್ಹೋತ್ರಾ ಸೇರಿದಂತೆ ಸ್ಟಾರ್ ಕಲಾವಿದರ ಜೊತೆ ತೆರೆಹಂಚಿಕೊಳ್ಳುವ ಚಾನ್ಸ್ ರಶ್ಮಿಕಾ ಮಂದಣ್ಣಗೆ ಸಿಕ್ಕಿದೆ. ಇದನ್ನೂ ಓದಿ: ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್, ಪೆಟ್ರೋಲ್ ಇಲ್ಲ