ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸೌತ್ ಮತ್ತು ಬಾಲಿವುಡ್ (Bollywood) ಚಿತ್ರರಂಗದಲ್ಲಿ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಪ್ರಸ್ತುತ ಬ್ಯಾಕ್ ಟು ಬ್ಯಾಕ್ 3 ಚಿತ್ರಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ರಜನಿಕಾಂತ್ ಚಿತ್ರದಲ್ಲಿ ವಿಲನ್ ರೋಲ್ ಮಾಡ್ತಿಲ್ಲ: ಪಾತ್ರದ ಬಗ್ಗೆ ಸೀಕ್ರೆಟ್ ಬಿಚ್ಚಿಟ್ಟ ಉಪೇಂದ್ರ
ಬಹುಭಾಷಾ ನಟಿಯಾಗಿ ಜನಪ್ರಿಯತೆ ಗಳಿಸಿರುವ ನಟಿ ರಶ್ಮಿಕಾ, ಏಕಕಾಲದಲ್ಲಿ ಸಲ್ಮಾನ್ ಖಾನ್ ಜೊತೆ ಸಿಖಂದರ್ (Sikandar), ‘ಪುಷ್ಪ 2’ (Pushpa 2) ಸಿನಿಮಾದ ಕೊನೆಯ ಹಂತದ ಶೂಟಿಂಗ್ ನಡೆಯುತ್ತಿದೆ. ಇದರ ಜೊತೆಗೆ ಮುಂಬೈನಲ್ಲಿ ಧನುಷ್ ಜೊತೆಗಿನ ‘ಕುಬೇರ’ (Kubera) ಸಿನಿಮಾದ ಶೂಟಿಂಗ್ ಕೂಡ ಮಾಡಲಾಗ್ತಿದೆ. ನಟಿಯ ಹಾರ್ಡ್ ವರ್ಕ್‌ಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನೂ ‘ಪುಷ್ಪ 2’ ಮತ್ತು ‘ಛಾವಾ’ ಸಿನಿಮಾ ಡಿಸೆಂಬರ್‌ನಲ್ಲಿ ರಿಲೀಸ್‌ಗೆ ಸಿದ್ಧವಾಗಿದೆ. ಕುಬೇರ, ಸಿಖಂದರ್, ರೈನ್‌ಬೋ, ದಿ ಗರ್ಲ್‌ಫ್ರೆಂಡ್ ಚಿತ್ರಗಳು ರಶ್ಮಿಕಾ ಕೈಯಲ್ಲಿವೆ. ಇನ್ನೂ ಜ್ಯೂ.ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ (Prashanth Neel) ಸಿನಿಮಾಗೆ ರಶ್ಮಿಕಾರನ್ನೇ ಹೀರೋಯಿನ್ ಆಗಿ ಆಯ್ಕೆ ಮಾಡಿದ್ದಾರೆ ಎಂಬ ಸುದ್ದಿ ವೈರಲ್ ಆಗ್ತಿದೆ. ಇದು ನಿಜನಾ? ಚಿತ್ರತಂಡ ಘೋಷಣೆ ಮಾಡಬೇಕಿದೆ.
ಸದ್ಯ ಬೇಡಿಕೆ ನಟಿಯಾಗಿರು ರಶ್ಮಿಕಾ ಕಥೆಗೆ ಮತ್ತು ಪಾತ್ರಕ್ಕೆ ಭಾರೀ ಪ್ರಾಮುಖ್ಯತೆ ನೀಡುತ್ತಾರೆ. ಅದರಿಂದಲೇ ಸಕ್ಸಸ್‌ಫುಲ್ ಪ್ಯಾನ್ ಇಂಡಿಯಾ ನಾಯಕಿಯಾಗಿ ಸದ್ದು ಮಾಡುತ್ತಿದ್ದಾರೆ.