ಕನ್ನಡದ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರಿಗೆ ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಪ್ರಭಾಸ್ (Prabhas) ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ (Spirit) ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ಎಲ್ಲಾ ಸಂದರ್ಭಕ್ಕೂ ನಗುವೇ ಒಳ್ಳೆಯ ಉತ್ತರ – ದರ್ಶನ್ ಭೇಟಿ ಬಳಿಕ ಪವಿತ್ರಾ ಪೋಸ್ಟ್!
‘ಭೈರತಿ ರಣಗಲ್, ಭಘೀರ’ ಸಿನಿಮಾದ ಬಳಿಕ ರುಕ್ಮಿಣಿ ವಸಂತ್‌ಗೆ (Rukmini Vasanth) ತೆಲುಗು, ತಮಿಳಿನಿಂದ ಭರ್ಜರಿ ಆಫರ್ಸ್ ಅರಸಿ ಬರುತ್ತಿವೆ. ಪ್ರಭಾಸ್ ಜೊತೆ ನಟಿಸುವ ಆಫರ್ ರುಕ್ಮಿಣಿಗೆ ಸಿಕ್ಕಿದೆಯಂತೆ. ಮೊದಲಿಗೆ ‘ಸ್ಪಿರಿಟ್’ ಸಿನಿಮಾಗೆ ದೀಪಿಕಾ ಪಡುಕೋಣೆ ಆಯ್ಕೆ ಆಗಿದ್ದರು. ಆದರೆ ಅವರು ಹೆಚ್ಚಿನ ಸಂಭಾವನೆ ಕೇಳಿದ್ದಕ್ಕೆ ರುಕ್ಮಿಣಿ ಅವರನ್ನು ನಟಿಸಲು ಕೇಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಒಟ್ನಲ್ಲಿ ಕನ್ನಡದ ನಟಿಯನ್ನ ಪ್ರಭಾಸ್ ಜೊತೆಗೆ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇದನ್ನೂ ಓದಿ:ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ
ವಿಜಯ್ ಸೇತುಪತಿ, ರುಕ್ಮಿಣಿ ನಟನೆಯ ‘ಏಸ್’ ಚಿತ್ರ ಇಂದು ರಿಲೀಸ್ ಆಗಿದೆ. ಅಮರನ್ ನಟ ಶಿವಕಾರ್ತಿಕೇಯನ್ ಜೊತೆಗಿನ ‘ಮದರಾಸಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್ ಚರಣ್ ಜೊತೆಗೆ ನಟಿಸಲು ಕೂಡ ನಟಿಯ ಜೊತೆ ಮಾತುಕತೆ ಆಗಿದೆ ಎನ್ನಲಾಗಿದೆ.
ಕರ್ನಾಟಕದಿಂದ ರಶ್ಮಿಕಾ ಮಂದಣ್ಣ (Rashmika Mandanna), ಶ್ರೀಲೀಲಾ ಅವರಂತೆಯೇ ರುಕ್ಮಿಣಿ ವಸಂತ್ ಕೂಡ ಸಕ್ಸಸ್‌ಗಾಗಿ ಸಿನಿಮಾ ಆಯ್ಕೆಯಲ್ಲಿ ಚ್ಯುಸಿಯಾಗಿದ್ದಾರೆ. ಹೀಗೆ ಸೌತ್‌ನಿಂದ ಸಾಕಷ್ಟು ಸಿನಿಮಾ ಅವಕಾಶಗಳು ನಟಿಯನ್ನು ಅರಸಿ ಬರುತ್ತಿವೆ.