ಅಮಲಾ ಪೌಲ್ ಮಾಜಿ ಪತಿ ಜೊತೆ ಸಾಯಿ ಪಲ್ಲವಿ ಡೇಟಿಂಗ್!

Public TV
1 Min Read
SAI PALLAVI

ಹೈದರಾಬಾದ್: ದಕ್ಷಿಣದ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಈಗ ನಟಿ ಅಮಲಾ ಪೌಲ್ ಮಾಜಿ ಪತಿ ತಮಿಳು ನಿರ್ದೇಶಕ ಎ.ಎಲ್. ವಿಜಯ್ ಜೊತೆ ಡೇಟಿಂಗ್ ನಲ್ಲಿ ಇದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಸಾಯಿ ಪಲ್ಲವಿ ಅವರು ಅಮಲಾ ಪೌಲ್ ಮಾಜಿ ಪತಿ ವಿಜಯ್ ತುಂಬಾ ದಿನಗಳಿಂದ ಒಟ್ಟಿಗೆ ಸುತ್ತಾಡುತ್ತಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಸದ್ಯದಲ್ಲಿ ಮದುವೆ ಕೂಡ ಆಗಲಿದ್ದಾರೆ. ಆದರೆ ಯಾರೊಬ್ಬರು ಈ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.

amala al vijay 759

ವಿಜಯ್-ಅಮಲಾ ಪೌಲ್
2011 ರಲ್ಲಿ ‘ದೈವಾ ತಿರುಮಗಲ್’ ಸಿನಿಮಾದಲ್ಲಿ ಅಮಲಾ ಪೌಲ್ ಮತ್ತು ನಿರ್ದೇಶಕ ಎ.ಎಲ್ ವಿಜಯ್ ಒಟ್ಟಿಗೆ ಕೆಲಸ ಮಾಡಿದ್ದರು. ಆಗ ಅವರಿಬ್ಬರಿಗೂ ಪರಿಚಯವಾಗಿ ಸ್ನೇಹವಾಗಿತ್ತು. ನಂತರ ಇಬ್ಬರು ಡೇಟಿಂಗ್ ಮಾಡುತ್ತಿದ್ದರು. ಕೊನೆಗೆ 2014ರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯಗಳ ಪ್ರಕಾರ ಇಬ್ಬರು ಮದುವೆಯಾಗಿದ್ದರು. ಆದರೆ ಅಮಲಾ ಮತ್ತು ಅವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಇಬ್ಬರು 2016 ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ಪರಸ್ಪರ ಒಪ್ಪಿಗೆಯ ಮೇರೆಗೆ ಫೆಬ್ರವರಿ 2017ರಲ್ಲಿ ಅವರಿಗೆ ವಿಚ್ಛೇದನ ಪಡೆದಿದ್ದರು.

sai

ವಿಜಯ್-ಸಾಯಿ ಪಲ್ಲವಿ:
ನಟಿ ಸಾಯಿ ಪಲ್ಲವಿ ಅಭಿನಯದ ‘ದಿಯಾ’ ಎಂಬ ತಮಿಳು ಸಿನಿಮಾವನ್ನು ವಿಜಯ್ ನಿರ್ದೇಶನ ಮಾಡಿದ್ದಾರೆ. ಇದೇ ಸಿನಿಮಾ ತೆಲುಗಿನಲ್ಲಿ ‘ಕಣಂ’ ಹೆಸರಿನಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಇಬ್ಬರಿಗೂ ಪರಿಚಯವಾಗಿ ಪ್ರೀತಿ ಆರಂಭವಾಗಿದೆ ಎಂದು ವರದಿಯಾಗಿದೆ. ಇದೀಗ ಇವರಿಬ್ಬರು ಮದುವೆಯಾಗಲಿದ್ದು, ಶೀಘ್ರದಲ್ಲಿಯೇ ಅಧಿಕೃತವಾಗಿ ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ನಟಿ ಸಾಯಿ ಪಲ್ಲವಿ ಅವರು, “ನನಗೆ ಈಗಲೇ ಮದುವೆಯಾಗಲು ಇಷ್ಟವಿಲ್ಲ. ನಮ್ಮ ತಂದೆತಾಯಿಯನ್ನು ನೋಡಿಕೊಳ್ಳಬೇಕು” ಎಂದು ಹೇಳಿದ್ದರು. ಸದ್ಯಕ್ಕೆ ನಟ ಸೂರ್ಯ ಜೊತೆ ‘ಎನ್‍ಜಿಕೆ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅಭಿನಯಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *