ಸೌತ್ ಬ್ಯೂಟಿ ಸಮಂತಾ (Samantha) ಅವರು ದಳಪತಿ ವಿಜಯ್ ಜೊತೆ ಸಿನಿಮಾ ಮಾಡ್ತಾರೆ ಎಂಬ ಸುದ್ದಿ ಹಬ್ಬಿದೆ. ಫ್ಯಾನ್ಸ್ ಈ ಸುದ್ದಿ ಕೇಳೆ ಸೆಲೆಬ್ರೇಶನ್ ಶುರು ಹಚ್ಚಿಕೊಂಡಿದ್ದಾರೆ. ಇದರ ನಡುವೆ ಸಮಂತಾ ಪದ್ಮಾವತಿ (Padmavathi Temple) ಅಮ್ಮನವರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ:‘ಯುಐ’ ಸಾಂಗ್ ಔಟ್- ಕಾಯ್ತಿದ್ದವರಿಗೆ ಟ್ರೋಲ್ ಸಾಂಗ್ ಕೊಟ್ಟ ಉಪ್ಪಿ
ವಿಐಪಿ ಸಾಲಿನಲ್ಲಿ ನಿಂತು ಸಮಂತಾ, ತಿರುಚಾನೂರಿನ ಶ್ರೀ ಪದ್ಮಾವತಿ ಅಮ್ಮನವರ ದರ್ಶನ ಪಡೆದು ವಿಶೇಷ ಸಲ್ಲಿಸಿದ್ದರು. ಈ ವೇಳೆ, ಸಮಂತಾರನ್ನು ಅಭಿಮಾನಿಗಳು ನೋಡಿ ಸೆಲ್ಫಿಗಾಗಿ ಮುಗಿಬಿದ್ದಿದ್ದರು. ಇತ್ತೀಚೆಗಷ್ಟೇ ಮತ್ತೆ ಸಿನಿಮಾಗೆ ಬರೋದಾಗಿ ನಟಿ ತಿಳಿಸಿದ್ದರು. ಸಮಂತಾ ಹೊಸ ಪ್ರಾಜೆಕ್ಟ್‌ಗಳ ಬಗ್ಗೆ ಕೂಡ ಸದ್ದು ಮಾಡುತ್ತಿದೆ. ಸಿನಿಮಾ ಶೂಟಿಂಗ್ ಶುರುವಾಗುವ ಮುನ್ನ ದೇವರ ಸನ್ನಿಧಿಗೆ ನಟಿ ತೆರಳಿದ್ದಾರೆ.
Actress #SamanthaRuthPrabhu visited Sri Padmavati Ammavaari Temple in Tiruchanur this morning.@Samanthaprabhu2 pic.twitter.com/UoMJKahUDk
— Suresh PRO (@SureshPRO_) March 4, 2024
ವಿವಾದ, ಅನಾರೋಗ್ಯ, ಯಶಸ್ಸು ಎಲ್ಲವೂ ಅನುಭವಿಸಿರುವ ಜೀವ ಸಮಂತಾ. ನಾಗಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಸಮಂತಾ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಎಲ್ಲಾ ವಿಚಾರಕ್ಕೂ ಸಮಂತಾ ಕಡೆಯೇ ಬೆಟ್ಟು ಮಾಡಿ ತೋರಿಸುತ್ತಿದ್ದರು. ಸಹವಾಸವೇ ಬೇಡ ಅಂತ ವೃತ್ತಿರಂಗದಲ್ಲಿ ಬ್ಯುಸಿಯಾದರು. ಪುಷ್ಪ (Pushpa) ಚಿತ್ರದಲ್ಲಿ ಸೊಂಟ ಬಳುಕಿಸಿದ ಮೇಲೆ ಸಮಂತಾ ಲಕ್ ಬದಲಾಯ್ತು.
ಆದರೆ ಯಶೋದ ಮತ್ತು ಖುಷಿ ಸಿನಿಮಾ ಆದ್ಮೇಲೆ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಂಡಿರಲಿಲ್ಲ. ಎರಡೂ ಹೀನಾಯವಾಗಿ ಸೋತ ಚಿತ್ರಗಳು. ಸೋಲಿನ ಹೊಡೆತಕ್ಕೆ ಅನಾರೋಗ್ಯದ ಆಘಾತ ಎರಡನ್ನೂ ಸಹಿಕೊಳ್ಳೋಕೆ ಸ್ಯಾಮ್‌ಗೆ 6 ತಿಂಗಳು ಹಿಡಿಯಿತು. ಇದೀಗ ಮತ್ತೆ ಕೆಲಸಕ್ಕೆ ಮರಳಿದ್ದಾರೆ.
ಸದ್ಯ ಸಮಂತಾಗೆ (Samantha) ಟಾಲಿವುಡ್ ಮಾತ್ರವಲ್ಲ ಬಾಲಿವುಡ್‌ನಿಂದಲೂ ಬಂಪರ್ ಅವಕಾಶಗಳು ಅರಸಿ ಬರುತ್ತಿವೆ. ಹಾಗಾಗಿ ಸಮಂತಾ ಸಿನಿಮಾ ಮತ್ತು ಲುಕ್ ಹೇಗಿರಲಿದೆ ಎಂಬ ಚರ್ಚೆ ಕೂಡ ನಡೆದಿದೆ. ಹೊಸ ಕೆಲಸ ಅವರ ಕೆರಿಯರ್‌ಗೆ ತಿರುವು ಕೊಡಲಿ ಎಂದು ಸ್ಯಾಮ್ ಫ್ಯಾನ್ಸ್ ಆಶಿಸುತ್ತಿದ್ದಾರೆ.