ಹೈದರಾಬಾದ್: ಟಾಲಿವುಡ್ ನಟಿ ನಿನ್ನ ವಿಚ್ಛೇದ ಪಡೆದುಕೊಂಡಿರುವ ವಿಚಾರವಾನ್ನು ತಿಳಿಸಿದ್ದರು. ಆದರೆ ಇಂದು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೆಸರನ್ನು ಮತ್ತೆ ಬದಲಾಯಿಸಿಕೊಂಡು ಸುದ್ದಿಯಲ್ಲಿದ್ದಾರೆ.
ವಿಚ್ಛೇದನಕ್ಕೂ ತಿಂಗಳು ಮೊದಲು ಸಮಂತಾ ಅವರು ಅಕ್ಕಿನೇನಿ ಸರ್ ನೇಮ್ ಅನ್ನು ಸೋಶಿಯಲ್ ಮೀಡಿಯಾ ಖಾತೆಯಿಂದ ತೆಗೆದು ಹಾಕಿದ್ದರು. ಅಲ್ಲದೆ ಎಸ್ ಎಂದಷ್ಟೇ ಇಟ್ಟಿದ್ದರು. ಈ ಮೂಲಕ ವಿಚ್ಛೇದನ ಸುದ್ದಿ ಹುಟ್ಟಿಕೊಳ್ಳುವಂತೆ ಮಾಡಿದ್ದರು. ಈಗ ವಿಚ್ಛೇದನ ಪಡೆದ ಮರುದಿನ ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಸರು ಬದಲಿಸಿದ್ದಾರೆ. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ
Advertisement
Advertisement
ಇಂದು ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಸರು ಬದಲಿಸಿದ್ದಾರೆ. ಎಸ್ ಎಂದು ಇದ್ದ ಹೆಸರನ್ನು ಸಮಂತಾ ಎಂದು ಮಾಡಿದ್ದಾರೆ. ಮದುವೆಗೂ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಅವರ ಹೆಸರು ಸಮಂತಾ ರುತ್ ಪ್ರಭು ಎಂಬುದಾಗಿ ಇತ್ತು.
Advertisement
Advertisement
2017ರ ಅ.6ರಂದು ಹಿಂದೂ ಸಂಪ್ರದಾಯದ ಪ್ರಕಾರ ಇವರಿಬ್ಬರ ಮದುವೆ ನಡೆದಿತ್ತು. ಅ.7ರಂದು ಕ್ರೈಸ್ತ ಸಂಪ್ರದಾಯದಂತೆ ಮದುವೆ ಶಾಸ್ತ್ರಗಳನ್ನು ನೆರವೇರಿಸಲಾಗಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಈ ಜೋಡಿ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು. ಅಷ್ಟರಲ್ಲಾಗಲೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ತೀವ್ರ ನಿರಾಸೆ ಉಂಟು ಮಾಡಿದೆ.