ಸೋಷಿಯಲ್ ಮೀಡಿಯಾಗಳಲ್ಲಿ ಸದಾ ಬೋಲ್ಡ್ ಫೋಟೋಗಳನ್ನು ಹಾಕುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದ ನಟಿ ಸಂಯುಕ್ತ ಹೆಗ್ಡೆ (Samyuktha Hegde), ಇದೇ ಮೊದಲ ಬಾರಿಗೆ ಕಣ್ಣೀರು ಹಾಕುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೂಟಿಂಗ್ ಸಮಯದಲ್ಲಿ ಗಂಭೀರವಾಗಿ ಪೆಟ್ಟು ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿದ್ದ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ಆ ದಿನಗಳು ನರಕವನ್ನು ತೋರಿಸಿಬಿಟ್ಟವು ಅಂದಿದ್ದಾರೆ.
ಕಳೆದ ವರ್ಷ ‘ಕ್ರೀಮ್’ ಸಿನಿಮಾದ ಶೂಟಿಂಗ್ ಸಮಯದಲ್ಲಿ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದ ಕಿರಿಕ್ ಪಾರ್ಟಿ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರ ಕಾಲಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯಾಗಿತ್ತು. ಆ ಸಮಯದಲ್ಲಿ ತುಂಬಾ ನೋವನ್ನು ಅನುಭವಿಸಿದರಂತೆ ನಟಿ. ಇದನ್ನೂ ಓದಿ:ದುಲ್ಕರ್ ಸಲ್ಮಾನ್ ಚಿತ್ರಕ್ಕೆ ‘ಲಕ್ಕಿ ಬಾಸ್ಕರ್’ ಟೈಟಲ್ ಫಿಕ್ಸ್
ಶೂಟಿಂಗ್ ವೇಳೆ ಕಾಲಿಗೆ ಗಂಭೀರವಾಗಿಯೇ ಪೆಟ್ಟು ಬಿದ್ದಿತ್ತು. ಹಾಗಾಗಿ ಅನಿವಾರ್ಯವಾಗಿ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕಾಯಿತು. ಸರ್ಜರಿ ಯಶಸ್ವಿಯಾಗಿ ನಡೆದು ಎಂಟು ವಾರಗಳ ಕಾಲ ರೆಸ್ಟ್ ಮಾಡಬೇಕು ಎಂದು ವೈದ್ಯರು ಸೂಚಿಸಿದ್ದರು. ಅಲ್ಲದೇ, ಫಿಸಿಯೋಥೆರಪಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದರು.
ಕ್ರೀಮ್ ಸಿನಿಮಾದ ಸಾಹಸ ಸನ್ನಿವೇಶವನ್ನು ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಚಿತ್ರತಂಡವು ಡ್ಯೂಪ್ ಬಳಸುವಂತೆ ಹೇಳಿದರೂ, ಸಂಯುಕ್ತ ಹೆಗ್ಡೆ ಅತ್ಯುತ್ಸಾಹದಿಂದ ಡ್ಯೂಪ್ ಇಲ್ಲದೇ ತಾವೇ ಪಾಲ್ಗೊಂಡಿದ್ದರು, ಆಗ ಕಾಲು ಟ್ವಿಸ್ಟ್ ಆಗಿತ್ತು. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆಯನ್ನೂ ನೀಡಲಾಯಿತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದುಕೊಂಡು ಟ್ರೀಟ್ಮೆಂಟ್ ಪಡೆದರು. ಆದರೂ, ನೋವು ಕಡಿಮೆ ಆಗಿರಲಿಲ್ಲ. ಕೊನೆಗೂ ಆಸ್ಪತ್ರೆ ಸೇರಿ, ಚಿಕಿತ್ಸೆ ಪಡೆದಿದ್ದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]