Recent News

ಬಿಗ್‍ ಬಾಸ್ ಮನೆಯಲ್ಲಿ ಸಂಯುಕ್ತ ಹೆಗಡೆ ಕಿರಿಕ್ – ಸಮೀರ್ ಕೆನ್ನೆಗೆ ಹೊಡೆದು ದೊಡ್ಮನೆಯಿಂದ ಕಿಕ್‍ ಔಟ್

ಬೆಂಗಳೂರು: ಕಿರಿಕ್ ಹುಡುಗಿ ಸಂಯುಕ್ತ ಹೆಗಡೆ ಗೆಸ್ಟ್ ಆಗಿ ಬಿಗ್ ಮನೆಗೆ ಬಂದಿದ್ದರು. ಬಂದು 15 ದಿನ ಕಳೆದಿರಲಿಲ್ಲ, ಆಗಲೇ ಭಾರೀ ರಂಪಾಟ ಮಾಡಿ ಹೊರಹೋಗಿದ್ದಾರೆ. ಕಾಲೇಜು ಕುಮಾರ ಸಿನಿಮಾ ವಿಚಾರದಲ್ಲೂ ಈ ನಟಿ ಕಿರಿಕ್ ಮಾಡಿ ಸುದ್ದಿಯಾಗಿದ್ದರು.

ಜನಪ್ರಿಯ ರಿಯಾಲಿಟಿ ಶೋ ಕನ್ನಡದ ‘ಬಿಗ್‍ಬಾಸ್’ನಲ್ಲಿ ಕಿರಿಕ್ ನಟಿ ಸಂಯುಕ್ತ ಹೆಗಡೆ ಭಾರೀ ಹೈಡ್ರಾಮ ಮಾಡಿದ್ದಾರೆ. ಮುಟ್ಟಿದ್ರೆ ತಟ್ಬೀಡ್ತಿನಿ ಅಂದವರು ತೇಟ್ ರೌಡಿಯಂತೆ ಸಮೀರ್ ಆಚಾರ್ಯ ಅವರ ಕೆನ್ನೆಗೆ ಬಾರಿಸಿ ಕಿಕ್‍ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು. ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ.

ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು. ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು. ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.

Leave a Reply

Your email address will not be published. Required fields are marked *