ಸ್ಯಾಂಡಲ್‌ವುಡ್ ಬ್ಯೂಟಿ ಸಂಗೀತಾ ಭಟ್ (Sangeetha Bhat) ಅವರು ಫ್ಯಾಷನ್ ವಿಚಾರದಲ್ಲಿ ಒಂದಿಷ್ಟು ಹೊಸ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತಾರೆ. ಇದೀಗ ಅವರು ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಕಂಗೊಳಿಸಿದ್ದಾರೆ. ಬೋಲ್ಡ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಹೊಸ ಫೋಟೋಶೂಟ್ ಅನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಕ್ರೀಮ್ ಬಣ್ಣದ ಡ್ರೆಸ್ ಅನ್ನು ನಟಿ ಧರಿಸಿದ್ದಾರೆ. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಅವರು ಮಿಂಚಿದ್ದಾರೆ. ವಿವಿಧ ಭಂಗಿಗಳಲ್ಲಿ ಸಂಗೀತಾ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ನಟಿಯ ಹೇರ್ ಸ್ಟೈಲ್ ಕೂಡ ವಿಭಿನ್ನವಾಗಿದೆ.
ಪತ್ನಿ ಸಂಗೀತಾ ಅಂದಕ್ಕೆ ‘ಭಾಗ್ಯಲಕ್ಷ್ಮಿ’ ಸೀರಿಯಲ್ ಖ್ಯಾತಿಯ ಸುದರ್ಶನ್ ರಂಗಪ್ರಸಾದ್ ಅವರು ವಾವ್ ಎಂದು ಕಾಮೆಂಟ್ ಮಾಡಿದ್ದಾರೆ. ಪತ್ನಿಯ ಸ್ಟೈಲೀಶ್ ಲುಕ್‌ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ಸಮಂತಾ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್‌ಗೆ ರೆಡಿ
ಇನ್ನೂ ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ಸಂಗೀತಾ ನಟಿಸಿದ್ದಾರೆ. ಕನ್ನಡದ ಪ್ರೀತಿ ಗೀತಿ ಇತ್ಯಾದಿ, ಎರಡನೇ ಸಲ, ಕಿಸ್ಮತ್, ರೂಪಾಂತರ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
ಕಿರುತೆರೆಯಲ್ಲಿ ನೀಲಿ, ಚಂದ್ರಮುಖಿ ಸೀರಿಯಲ್‌ನಲ್ಲಿ ನಟಿಸಿದ್ದರು. ಬಳಿಕ 2024ರಲ್ಲಿ ಪವನ್ ಒಡೆಯರ್‌ಗೆ ನಾಯಕಿಯಾಗಿ ಪ್ರೀತಿ ಗೀತಿ ಇತ್ಯಾದಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ಸಂಗೀತಾ.