ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಇದೀಗ ಸಂಗೀತಾ ಶೃಂಗೇರಿ (Sangeetha Sringeri) ಅವರು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದಕ್ಕೆ ಕಾರಣ, ಸಂಗೀತಾ ಅವರು ಮಾಡಿರುವ ಯಡವಟ್ಟು. ಇಡೀ ಮನೆಗೆ ದಿನಸಿ ಪಡೆಯಲು ಬಿಗ್ ಬಾಸ್ ಟಾಸ್ಕ್‌ವೊಂದನ್ನ ನೀಡಿದ್ದರು. ಅದರಲ್ಲಿ ಸಂಗೀತಾ ದುಡುಕಿದ್ದಾರೆ. ಇದರಿಂದ ಮನೆಮಂದಿಯೆಲ್ಲಾ ಉಪವಾಸ ಬೀಳುವ ಪರಿಸ್ಥಿತಿ ಎದುರಾಗಿದೆ.
Advertisement
ವೀಕೆಂಡ್ ಎಪಿಸೋಡ್‌ನಲ್ಲಿ ಸುದೀಪ್ (Sudeep) ಮನೆಯ ದಿನಸಿಗಳನ್ನು ಗಳಿಸುವ ಚಟುವಟಿಕೆಯ ಬಗ್ಗೆ ಹಲವು ಕಿವಿಮಾತುಗಳನ್ನು ಹೇಳಿದ್ದರು. ಹಿಂದಿನ ಹಲವು ವಾರಗಳಲ್ಲಿ ತಪ್ಪು ಲೆಕ್ಕಾಚಾರದಿಂದ, ಸಿಲ್ಲಿ ತಪ್ಪುಗಳಿಂದ ದಿನಸಿಗಳನ್ನು ಕಳೆದುಕೊಳ್ಳುತ್ತಿರುವುದರ ಬಗ್ಗೆ ಸೂಕ್ಷ್ಮವಾಗಿ ಎಚ್ಚರಿಸಿದ್ದರು. ಅಷ್ಟೇ ಅಲ್ಲ, ಅದನ್ನು ಹೇಗೆ ನಿರ್ವಹಿಸಬೇಕು ಎಂಬ ಟಿಪ್ಸ್ ಕೂಡ ಕೊಟ್ಟಿದ್ದರು. ಇದನ್ನೂ ಓದಿ:ಪಡ್ಡೆಹುಡುಗರ ಎದೆಬಡಿತ ಹೆಚ್ಚಿಸಿದ ತೃಪ್ತಿ ದಿಮ್ರಿ ನಯಾ ಫೋಟೋಶೂಟ್
Advertisement
Advertisement
ಆಗ ಯಾರಿಗೂ ಸುದೀಪ್ ಯಾಕೆ ಇದನ್ನು ಹೇಳುತ್ತಿದ್ದಾರೆ ಎಂದು ಅರ್ಥವಾಗಿರಲಿಲ್ಲ. ಅವರ ಮಾತಿನ ಅರ್ಥ ಈಗ ಅಂದರೆ, ವಾರದ ಮೊದಲ ದಿನ ಅರ್ಥವಾಗಿದೆ. ಅದೂ ಕಾಲಮಿಂಚಿ ಹೋದಮೇಲೆ.. ಹಾಗಾದರೆ ಆಗಿದ್ದೇನು? ಬಿಗ್‌ಬಾಸ್ ದಿನಸಿ ಪಡೆದುಕೊಳ್ಳುವ ಕುರಿತು ಒಂದು ಟಾಸ್ಕ್ ನೀಡಿದ್ದಾರೆ. ನಾಲ್ಕು ಸ್ಪರ್ಧಿಗಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬಝರ್ ಎದುರು ನಿಂತುಕೊಂಡಿದ್ದಾರೆ. ಬಿಗ್‌ಬಾಸ್ ಮನೆಗೆ ಬೇಕಾದ ದಿನಸಿಗಳನ್ನು ಮತ್ತು ಅವುಗಳ ಪ್ರಮಾಣವನ್ನು ಹೇಳುತ್ತ ಹೋಗುತ್ತಾರೆ. ಆಗ ಬೇಕಾದ ದಿನಸಿಗಳ ಹೆಸರು-ಪ್ರಮಾಣ ಬಂದಾಗ ಬಝರ್ ಒತ್ತಬೇಕು.
Advertisement
ಈ ಟಾಸ್ಕ್ ಮೂಲಕ ಲಾಜಿಕ್ ಗೊತ್ತಾಗದೆ ಸದಸ್ಯರು ಯಡವಟ್ಟು ಮಾಡಿಕೊಂಡಿರುವಂತಿದೆ. ಪ್ರಮಾಣ ನೋಡಿಕೊಂಡು ಬಝರ್ ಒತ್ತುವಲ್ಲಿ ಎಡವಿರುವ ಸಂಗೀತಾ ಅಕ್ಕಿ ಐದು ಕೆಜಿ ಎಂದು ಬಿಗ್‌ಬಾಸ್ (Bigg Boss) ಘೋಷಿಸಿದ ತಕ್ಷಣ ಬಝರ್ ಒತ್ತಿಬಿಟ್ಟಿದ್ದಾರೆ. ಇದರಿಂದ ಇಡೀ ಮನೆ ಐದು ಕೆಜಿ ಅಕ್ಕಿಯಲ್ಲಿ ವಾರ ಕಳೆಯಬೇಕಾಗಿದೆ. ಜೊತೆಗೆ ಎಂಟು ಕೆಜಿ ಗೋದಿಹಿಟ್ಟು ಸಿಕ್ಕಿದೆ. ಉಳಿದ ಹಲವು ದಿನಸಿಗಳು ಒಂದು ಎರಡು ಕೆಜಿಗಳಷ್ಟೇ ದೊರಕಿವೆ.
ಇಲ್ಲಿ ಎಲ್ಲರೂ ಅಹಂಕಾರದಿಂದಲೇ ಸಾಯ್ತಾರೆ. ಮನೆಗೆ ದಿನಸಿ ಬೇಕು ಎಂದು ಹೇಳಿ ಕಳುಹಿಸಿದ್ದೀನಿ ಎಂದು ಸಿಡಿದಿದ್ದಾರೆ ವಿನಯ್. ಈ ವೇಳೆ ತುಕಾಲಿ ಸಂತೋಷ್, ಹೊಟ್ಟೆ ಹಸಿವು ಕಂಟ್ರೋಲ್ ಮಾಡಿಕೊಂಡು ಬಿಡೋಣ ಎಂದು ಅಸಮಾಧಾನ ಹೊರಹಾಕಿದ್ದಾರೆ. ಹಸಿವಿನಿಂದಲೇ ಎಲ್ಲ ಗಲಾಟೆಗಳೂ ಶುರುವಾಗುವುದು ಎಂಬ ಕಿಚ್ಚನ ಮಾತಿಗೆ ವಾರದ ಮೊದಲ ದಿನವೇ ಪುರಾವೆ ಸಿಕ್ಕಿದೆ. ಇಡೀ ವಾರ ಇದೀಗ ಸಿಕ್ಕಿರೋ ಕಡಿಮೆ ದಿನಸಿಗಳಲ್ಲಿ ಬಿಗ್‌ಬಾಸ್ ಮನೆಯವರು ಹೇಗೆ ಕಳೆಯುತ್ತಾರೆ? ಇದಕ್ಕೆ ಏನು ಪರಿಹಾರ ಕಂಡುಕೊಳ್ಳುತ್ತಾರೆ? ಅಥವಾ ಬಿಗ್‌ಬಾಸ್ ಅವರ ಸಹಾಯಕ್ಕೆ ಬರುತ್ತಾರಾ? ಕಾಯಬೇಕಿದೆ.