ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಹಿಂದೂ ದೇವಸ್ಥಾನಗಳಿಗೆ ಆಗಾಗ ಭೇಟಿ ನೀಡುಲೇ ಇರುತ್ತಾರೆ. ಇದೀಗ ಮಹಾರಾಷ್ಟ್ರದ ಗ್ರಿಷ್ಣೇಶ್ವರ ಜ್ಯೋತಿರ್ಲಿಂಗ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ಸುಂದರ ಫೋಟೋಗಳನ್ನು ಸಾರಾ ಶೇರ್ ಮಾಡಿದ್ದಾರೆ.
ಸೈಫ್ ಅಲಿ ಖಾನ್- ಅಮೃತಾ ಸಿಂಗ್ ಪುತ್ರಿ ಸಾರಾ ಚಿತ್ರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಗಟ್ಟಿ ನೆಲೆ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದರ ನಡುವೆ ಗ್ರಿಷ್ಣೇಶ್ವರ ಜ್ಯೋತಿರ್ಲಿಂಗ ದೇವಾಲಯಕ್ಕೆ ಸಾರಾ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅದರಲ್ಲಿ ನಂದಿ ಕಿವಿಯಲ್ಲಿ ಸಾರಾ ಕೋರಿಕೆ ಇಡುತ್ತಿರೋದು ಹೈಲೆಟ್ ಆಗಿದೆ.
ಈ ಹಿಂದೆ ಸಾರಾ, ಉಜ್ಜಯಿನಿಯ ಮಹಾಕಾಳೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಟೀಕೆಗೆ ಗುರಿಯಾಗಿದ್ದರು. ಇದೀಗ ಮತ್ತೆ ಶಿವನ ಸನ್ನಿಧಿಯಲ್ಲಿ ಭಕ್ತಿಯಿಂದ ಭಾಗವಹಿಸಿರೋದನ್ನು ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ನಿಮ್ಮ ಲೈಫ್‌ಗೆ ನಾನೇ ಶನಿ ಆಗ್ತೀನಿ- ಗುಡುಗಿದ ಸಂಗೀತಾ
ಸದ್ಯ ಸಾರಾ ಅಲಿ ಖಾನ್ ಸ್ಕೈ ಫೋರ್ಸ್’ ಚಿತ್ರದ ಮೂಲಕ ಅಕ್ಷಯ್ ಕುಮಾರ್‌ಗೆ (Akshay Kumar) ಜೋಡಿಯಾಗಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಒಂದಿಷ್ಟು ಸಿನಿಮಾಗಳ ಮಾತುಕತೆ ನಡೆಯುತ್ತಿದೆ.