ಬೆಂಗಳೂರು: ನಾನು ಯಾವುದೇ ಪಾರ್ಟಿ ಮಾಡಲು ಹೊರಗೆ ಹೋಗಿರಲಿಲ್ಲ. ಔಷಧಿಗಾಗಿ ಮನೆಯಿಂದ ಹೊರಗೆ ಹೋಗಿದ್ದೆ ಎಂದು ನಟಿ ಶರ್ಮಿಳಾ ಮಾಂಡ್ರೆ ಅಪಘಾತ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಆದರೆ ನಟಿ ಶರ್ಮಿಳಾ ಮಾಂಡ್ರೆ ರಾತ್ರೋರಾತ್ರಿ ಸ್ನೇಹಿತರ ಜೊತೆ ಜಾಗ್ವಾರ್ ಕಾರಿನಲ್ಲಿ ಜಾಲಿ ರೈಡ್ ಹೋಗಿ ಅಪಘಾತ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಶರ್ಮಿಳಾ ಮಾಂಡ್ರೆ ಮತ್ತು ಅವರ ಸ್ನೇಹಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸ್ವತಃ ಶರ್ಮಿಳಾ ಮಾಂಡ್ರೆ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.
Advertisement
Advertisement
ಶರ್ಮಿಳಾ ಅಪಘಾತದಲ್ಲಿ ಗಾಯಗೊಂಡಿರುವ ಬಗ್ಗೆ ಒಪ್ಪಿಕೊಂಡಿದ್ದು, ತಮ್ಮ ಅಪಘಾತದ ಸುದ್ದಿ ವೈರಲ್ ಆಗಿದೆ ಎಂದು ತಮಾಷೆಯಾಗಿ ಮಾತನಾಡಿದ್ದಾರೆ. ನಾನು ಔಷಧಿಯನ್ನು ಖರೀದಿಸಲು ಮಾತ್ರ ಮನೆಯಿಂದ ಹೊರ ಹೋಗಿದ್ದೆ. ಲಾಕ್‍ಡೌನ್ ಸಮಯದಲ್ಲಿ ಓಡಾಡಲು ಪಾಸ್ ಹೊಂದಿದ್ದ ಸ್ನೇಹಿತರ ಸಹಾಯವನ್ನು ಪಡೆದಿದ್ದೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
“ನನಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆಗ ನನ್ನ ಸ್ನೇಹಿತರಾದ ಲೋಕೇಶ್ ಮತ್ತು ಡಾನ್ ಥಾಮಸ್ ಇಬ್ಬರ ಸಹಾಯವನ್ನು ಕೇಳಿದೆ. ಯಾಕೆಂದರೆ ಅವರ ಬಳಿ ಲಾಕ್‍ಡೌನ್ ವೇಳೆ ಓಡಾಡುವ ಪಾಸ್ ಇತ್ತು. ಹೀಗಾಗಿ ನನ್ನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಮನವಿ ಮಾಡಿಕೊಂಡೆ. ಈ ವೇಳೆ ಅಪಘಾತವಾಗಿದೆ. ಆದರೆ ನಾನು ಕಾರು ಓಡಿಸುತ್ತಿರಲಿಲ್ಲ. ಕಾರಿನ ಹಿಂಬದಿ ಸೀಟಿನಲ್ಲಿ ನಾನು ಕುಳಿತಿದ್ದೆ. ನನ್ನ ಸ್ನೇಹಿತ ಡಾನ್ ಕಾರು ಓಡಿಸುತ್ತಿದ್ದ. ಈ ಅಪಘಾತದಲ್ಲಿ ನನ್ನ ಕುತ್ತಿಗೆಗೆ ಪೆಟ್ಟಾಗಿದೆ” ಎಂದು ಅಪಘಾತದ ಬಗ್ಗೆ ತಿಳಿಸಿದ್ದಾರೆ.
Advertisement
ಅಪಘಾತದ ನಂತರ ನನ್ನ ಬಗ್ಗೆ ಬಂದಿರುವ ಸುದ್ದಿಗಳ ಬಗ್ಗೆ ಕೇಳಿದ್ದೇನೆ ಎಂದು ಪಾರ್ಟಿಯಿಂದ ಹಿಂದಿರುಗುತ್ತಿದ್ದಾಗ ಅಪಘಾತ ಮಾಡಿರುವುದನ್ನು ತಳ್ಳಿ ಹಾಕಿದ್ದಾರೆ. ನಾವು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಎಷ್ಟು ಮುಖ್ಯ ಎಂದು ನನಗೆ ಗೊತ್ತು. ಆದರೂ ನಾನು ಪಾರ್ಟಿಯಲ್ಲಿ ಪಾಲ್ಗೊಳ್ಳಲು ಯಾವುದೇ ಮಾರ್ಗವಿಲ್ಲ. ಕೊರೊನಾ ವೈರಸ್ ದಿನೇ ದಿನೇ ವ್ಯಾಪಿಸುತ್ತಿರುವ ಕಾರಣದಿಂದ ನಾನು ಮನೆಯಲ್ಲಿಯೇ ಕಟ್ಟುನಿಟ್ಟಾಗಿ ಇದ್ದೇನೆ. ಆದರೆ ನಡೆದ ಘಟನೆಯನ್ನು ತಿಳಿದುಕೊಳ್ಳದೆ, ಅಪಘಾತದ ಸುದ್ದಿ ಎಲ್ಲೆಡೆ ವೈರಲ್ ಆಗಿರುವುದು ದುರದೃಷ್ಟಕರ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸದ್ಯಕ್ಕೆ ಶರ್ಮಿಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರಿಗೆ ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ.
ಶರ್ಮಿಳಾ ಮಾಂಡ್ರೆ ಕಾರು ಅಪಘಾತ ಪ್ರಕರಣದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಸಂಚಾರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಶರ್ಮಿಳಾ, ಶಿಫಾ ಜೋಹರ್, ಲೋಕೇಶ್ ಮತ್ತು ಡಾನ್ ಥಾಮಸ್ ನಾಲ್ಕು ಮಂದಿ ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ.