13 ವರ್ಷದ ನಂತ್ರ ಬೆಳ್ಳಿತೆರೆಗೆ ಶಿಲ್ಪಾ ಶೆಟ್ಟಿ ಎಂಟ್ರಿ

Public TV
1 Min Read
shilpa shetty

ನವದೆಹಲಿ: ನಟಿ ಶಿಲ್ಪಾ ಶೆಟ್ಟಿ ಅವರು ಮದುವೆಯಾದ ನಂತರ ಸಿನಿಮಾರಂಗದಿಂದ ದೂರು ಉಳಿದಿದ್ದರು. ಇದೀಗ ಬರೋಬ್ಬರಿ 13 ವರ್ಷಗಳ ನಂತರ ಬೆಳ್ಳಿತೆರೆಗೆ ಕಮ್‍ಬ್ಯಾಕ್ ಮಾಡುತ್ತಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ಅವರು 2007ರ ನಂತರ ಚಿತ್ರರಂಗದಿಂದ ದೂರ ಉಳಿದಿದ್ದರು. ಇದೀಗ ‘ನಿಕಮ್ಮಾ’ ಸಿನಿಮಾದ ಮೂಲಕ ಮತ್ತೆ ತಮ್ಮ ಸಿನಿ ಪಯಣವನ್ನು ಮುಂದುವರಿಸುತ್ತಿದ್ದಾರೆ. 2007ರಲ್ಲಿ ತೆರೆಕಂಡಿದ್ದ ‘ಅಪ್ನೆ’ ಸಿನಿಮಾದ ನಂತರ ಕೆಲವು ಅತಿಥಿ ಪಾತ್ರವನ್ನು ಮಾಡುತ್ತಿದ್ದರು. ಬಳಿಕ 2009ರಲ್ಲಿ ಶಿಲ್ಪಾ ಶೆಟ್ಟಿ ಅವರು ರಾಜ್ ಕುಂದ್ರಾ ಜೊತೆ ಮದುವೆಯಾಗಿದ್ದು, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಚಿತ್ರರಂಗದಿಂದ ದೂರ ಸರಿದಿದ್ದರು.

nikamma d

ಬೆಳ್ಳಿತೆರೆಗೆ ಕಮ್‍ಬ್ಯಾಕ್ ಮಾಡುತ್ತಿರುವ ಬಗ್ಗೆ ಮಾತನಾಡಿದ ಶಿಲ್ಪಾ ಶೆಟ್ಟಿ ಅವರು, “ನಾನು ಸಿನಿಮಾಗಾಗಿ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಈಗ ಎಲ್ಲವೂ ನನಗೆ ಹೊಸದು. ಚಿತ್ರದ ಸ್ಕ್ರಿಪ್ಟ್ ನನಗೆ ತುಂಬಾ ಇಷ್ಟವಾಯಿತು. ಇದೊಂದು ರೊಮ್ಯಾಂಟಿಕ್, ಹಾಸ್ಯದ ಸಿನಿಮಾವಾಗಿದೆ. ಸಬ್ಬೀರ್ ಖಾನ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ನಿರ್ದೇಶಕರಾಗಿರುವ ಸಬ್ಬೀರ್ ಖಾನ್ ಅವರು ನನ್ನನ್ನು ವಿಭಿನ್ನ ರೀತಿಯಲ್ಲಿ ತೆರೆಯ ಮೇಲೆ ತೋರಿಸುತ್ತಾರೆಂದು ನಾನು ಭಾವಿಸುತ್ತೇನೆ. ಅದಕ್ಕಾಗಿ ನಾನು ಉತ್ಸುಕಳಾಗಿದ್ದೇನೆ” ಎಂದು ಹೇಳಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ಅವರು 1993ರಲ್ಲಿ ‘ಬಾಜಿಗರ್’ ಸಿನಿಮಾದ ಮೂಲಕ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಂತರ ‘ಧಡ್ಕನ್’, ‘ಮಿಸ್ಟರ್ ರೋಮಿಯೋ’, ‘ಹಿಮ್ಮತ್’, ‘ಔಜಾರ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಾಲಿವುಡ್ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲೂ ನಟಿಸಿದ್ದರು. ಅಷ್ಟೇ ಅಲ್ಲದೇ ಶಿಲ್ಪಾ ಶೆಟ್ಟಿ ಅವರು ಕನ್ನಡದಲ್ಲೂ ಕೆಲವು ಸಿನಿಮಾಗಳನ್ನು ಮಾಡಿದ್ದಾರೆ. ನಟ ರವಿಚಂದ್ರನ್, ಉಪೇಂದ್ರ ಅವರ ಜೊತೆ ಅಭಿನಯಿಸಿದ್ದು, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ.

696102 shilpa

ಮದುವೆಯಾಗಿ ಒಂದು ಮಗು ಆದ ಬಳಿಕವೂ ಶಿಲ್ಪಾ ಶೆಟ್ಟಿ ತಮ್ಮ ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದರು. ಯೋಗ, ಜಿಮ್‍ನಲ್ಲಿ ವರ್ಕೌಟ್ ಮಾಡಿ ಸೌಂದರ್ಯವನ್ನು ಕಾಪಾಡಿಕೊಂಡಿದ್ದಾರೆ. 44 ವರ್ಷದ ಶಿಲ್ಪಾ ಶೆಟ್ಟಿ ಈಗಲೂ ಯುವನಟಿಯಂತೆ ಗ್ಲಾಮರ್ ಹೊಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *