ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ನೀಲಿ ಚಿತ್ರ ನಿರ್ಮಾಣದ ಕೇಸ್‍ನಿಂದಾಗಿ ಬೇಸರಕ್ಕೆ ಒಳಗಾಗಿದ್ದರು. ಆದರೆ ಈಗ ಈ ಎಲ್ಲ ಬೇಸರದಿಂದ ಹೊರಗೆ ಬಂದು ಮಕ್ಕಳ ಜೊತೆಗೆ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಶಿಲ್ಪಾ ಆಚರಣೆ ಮಾಡಿದ್ದಾರೆ.
ಕೆಲವು ವಿಚಾರಗಳನ್ನು ನಾವು ಆಚರಿಸದ ಹೊರತು ನಮ್ಮ ಮುಂದಿನ ತಲೆಮಾರಿನವರಿಗೆ ಅವುಗಳನ್ನು ದಾಟಿಸಲು ಸಾಧ್ಯವಿಲ್ಲ. ನಮ್ಮ ತಂದೆ-ತಾಯಿ ನಮ್ಮನ್ನು ಬೆಳೆಸಿದ ರೀತಿಯಲ್ಲೇ ಮೌಲ್ಯ ಮತ್ತು ಸಂಪ್ರದಾಯದೊಂದಿಗೆ ನಮ್ಮ ಮಕ್ಕಳು ಕೂಡ ಬೆಳೆಯಬೇಕು ಎಂಬುದು ನನಗೆ ತುಂಬ ಮುಖ್ಯವಾಗಿದೆ. ನನ್ನ ಇಬ್ಬರು ಮಕ್ಕಳಲ್ಲೂ ನಂಬಿಕೆಯ ಬೀಜ ಬಿತ್ತುತ್ತಿದ್ದೇನೆ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡು ಮಕ್ಕಳ ಜೊತೆಗೆ ಪೂಜೆ ಮಾಡುತ್ತಿರುವ ವೀಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ
View this post on Instagram
ಮಕ್ಕಳ ಜೊತೆ ಸೇರಿ ಅವರು ಸಡಗರದಿಂದ ಹಬ್ಬ ಆಚರಿಸಿದ್ದಾರೆ. ದೇವರಿಗೆ ವಿಶೇಷ ಅಲಂಕಾರ, ನೈವೇದ್ಯ ಮಾಡಿ, ಭಕ್ತಿಯಿಂದ ಪೂಜೆ ನೆರವೇರಿಸಿದ್ದಾರೆ. ಶಿಲ್ಪಾ ಶೆಟ್ಟಿ ಹಂಚಿಕೊಂಡಿರುವ ವೀಡಿಯೋದಲ್ಲಿ ವಿಹಾನ್ ಕುಂದ್ರಾ ಭಕ್ತಿಯಿಂದ ಭಜನೆ ಹೇಳುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿ. ಈ ವೀಡಿಯೋ ನೋಡಿದ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಅಪ್ಪ ಅರೆಸ್ಟ್, ಅಮ್ಮ ಕಣ್ಣೀರು – ಪೋಸ್ಟ್ ಮಾಡಿ ಸುದ್ದಿಯಾದ ಶಿಲ್ಪಾ ಶೆಟ್ಟಿ ಮಗ
ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನೀಲಿ ಚಿತ್ರ ನಿರ್ಮಾಣದ ಪ್ರಕರಣದಿಂದ ಸದ್ಯ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಒಂದಷ್ಟು ದಿನಗಳ ಕಾಲ ಜೈಲುವಾಸ ಅನುಭವಿಸಿ ಬಂದ ಅವರು ಈಗ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಈ ಪ್ರಕರಣ ಕುರಿತಾಗಿ ಕೋರ್ಟ್ ಯಾವ ರೀತಿ ತೀರ್ಪು ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.