BollywoodCinemaLatestMain PostNational

ಜೈಲಿನಿಂದ ರಿಲೀಸ್ ಬಳಿಕ ಫಸ್ಟ್ ಟೈಂ ಪತ್ನಿ ಜೊತೆ ಕಾಣಿಸಿಕೊಂಡ ರಾಜ್ ಕುಂದ್ರಾ

– ವಿಚ್ಛೇದನ ವದಂತಿಗೆ ಬ್ರೇಕ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಜೈಲಿನಿಂದ ಬಿಡುಗಡೆ ಆದ ನಂತರ ಮೊದಲ ಬಾರಿಗೆ ಪತ್ನಿಯ ಜೊತೆಗೆ ಕಾಣಿಸಿಕೊಳ್ಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

ರಾಜ್ ಕುಂದ್ರಾ ಅವರು ಜೈಲಿನಿಂದ ಬಿಡುಗಡೆಯಾದ ನಂತರ ದಂಪತಿ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಶಿಲ್ಪಾ ಅವರು ಪತಿ ರಾಜ್ ಕುಂದ್ರಾ ಜೊತೆ ಹಿಮಾಚಲ ಪ್ರದೇಶದ ಧರ್ಮಶಾಲಾದ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ಫೋಟೋ, ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ:  ಬಿಟ್‌ಕಾಯಿನ್‌ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ

 

View this post on Instagram

 

A post shared by GLAM_UNIVERSE (@vinitasaman123)

ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಲುಕಿದ್ದರು. ಇದೀಗ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಈ ಪ್ರಕರಣ ಶಿಲ್ಪಾ ಕುಟುಂಬಕ್ಕೆ ಸಾಕಷ್ಟು ಮುಜುಗರ ತಂದಿತ್ತು. ಪತಿ ಜೊತೆ ಅವರು ಎಂದಿಗೂ ಕಾಣಿಸಿಕೊಂಡಿರಲಿಲ್ಲ. ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಇದನ್ನು ಶಿಲ್ಪಾ ಸುಳ್ಳು ಮಾಡಿದ್ದಾರೆ. ಪತಿ ರಾಜ್ ಕುಂದ್ರಾ ಜೊತೆಗೆ ಅವರು ಇದೇ ಮೊದಲ ಬಾರಿಗೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ವದಂತಿಗೆ ಬ್ರೇಕ್ ಹಾಕಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ

ಆರಂಭದಲ್ಲಿ ಶಿಲ್ಪಾ ಸೋಶಿಯಲ್ ಮೀಡಿಯಾದಿಂದ ಕೆಲ ದಿನ ಶಿಲ್ಪಾ ಶೆಟ್ಟಿ ದೂರ ಉಳಿದಿದ್ದರು. ಕೆಲವು ದಿನಗಳ ನಂತರ ಫಿಟ್‍ನೆಸ್ ವೀಡಿಯೋಗಳು ಮತ್ತು ಕುಟುಂಬ ಫೋಟೋವನ್ನು ಹಂಚಿಕೊಳ್ಳುವ ಮೂಲಕವಾಗಿ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

Leave a Reply

Your email address will not be published. Required fields are marked *

Back to top button