ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shradha Kapoor) ಹೆಸರು ಆಗಾಗ ರಾಹುಲ್ ಮೋದಿ (Rahul Mody) ಅವರ ಜೊತೆ ಕೇಳಿ ಬಂದಿತ್ತು. ಇದೀಗ ಅನಂತ್ ಅಂಬಾನಿ-ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಜೊತೆಯಾಗಿ ಶ್ರದ್ಧಾ- ರಾಹುಲ್ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಕಿರುತೆರೆಗೆ ಕಾಲಿಟ್ಟ ಹಾಸ್ಯ ನಟ ಟೆನ್ನಿಸ್ ಕೃಷ್ಣ
ಅಂಬಾನಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಗುಜರಾತ್‌ನ ಜಾಮ್‌ನಗರದಲ್ಲಿ ಆಯೋಜಿಸಿರುವ ಪ್ರೀ-ವೆಡ್ಡಿಂಗ್ ಕಾರ್ಯಕ್ರಮಕ್ಕೆ ಬಾಲಿವುಡ್ ಸ್ಟಾರ್ ಕಲಾವಿದರ ದಂಡೇ ಸಾಕ್ಷಿಯಾಗಿದೆ. ಇದರ ನಡುವೆ ಶ್ರದ್ಧಾ ಕಪೂರ್ ಬಾಯ್‌ಫ್ರೆಂಡ್ ರಾಹುಲ್ ಜೊತೆ ಎಂಟ್ರಿ ಕೊಡುವ ಮೂಲಕ ಹೈಲೆಟ್ ಆಗಿದ್ದಾರೆ.
View this post on Instagram
ಸಂಬಂಧದ ಬಗ್ಗೆ ನಟಿ ಅಧಿಕೃತವಾಗಿ ಹೇಳಿಲ್ಲ. ಆದರೆ ಮೊದಲ ಬಾರಿಗೆ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿರೋದು ಎಂಗೇಜ್ ಆಗಿದ್ದಾರೆ ಎನ್ನಲಾದ ಸುದ್ದಿಗೆ ಪುಷ್ಠಿ ಸಿಕ್ಕಂತೆ ಆಗಿದೆ. ಇಬ್ಬರೂ ಜೊತೆಯಾಗಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಕಾಶಿ ವಿಶ್ವನಾಥನ ದರ್ಶನ ಪಡೆದ ತಮನ್ನಾ ಭಾಟಿಯಾ
ಅನಂತ್ ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ ಶುರುವಾಗಿದ್ದು, 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಗುಜರಾತ್‌ನ ಜಾಮ್‌ನಗರವನ್ನು ಸಿಂಗರಿಸಲಾಗಿದೆ. ಅನಂತ್ ಪ್ರೀ-ವೆಡ್ಡಿಂಗ್ ಮದುವೆ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ನಡೆಯುತ್ತಿದೆ.
View this post on Instagram
ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್‌ನ ಮುಖ್ಯ ಆಕರ್ಷಣೆ ಎಂದರೆ ಸುಪ್ರಸಿದ್ಧ ಗಾಯಕಿ ರಿಯಾನಾ ಅವರ ಸಂಗೀತ ಕಾರ್ಯಕ್ರಮ. ಅನಂತ್-ರಾಧಿಕಾ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದ ಸುಂದರ ಸಂಜೆಗೆ ರಿಯಾನಾ ಗಾಯನ ಕಿಕ್ ಕೊಟ್ಟಿದೆ. ಕಾರ್ಯಕ್ರಮದಲ್ಲಿ ಹಾಡಲು ರಿಯಾನಾ, ಬರೋಬ್ಬರಿ 74 ಕೋಟಿ ರೂ. ಸಂಭಾವನೆ ಪಡೆದು ಎಲ್ಲರ ಹುಬ್ಬೇರಿಸಿದ್ದಾರೆ.
ಅನಂತ್ ಅಂಬಾನಿ ಮದುವೆಯಾಗಿ ಅದ್ಧೂರಿ ದೇಗುಲ ನಿರ್ಮಿಸಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು ಹಾಗೂ ಕರಕುಶಲವಸ್ತುಗಳು ಇಲ್ಲಿ ಕಾಣಬಹುದು.
View this post on Instagram
ಮದುವೆಯ ಪೂರ್ವ ಸಂಭ್ರಮದಲ್ಲಿ ಶಾರುಖ್ ಖಾನ್, ಗೌರಿ ಖಾನ್, ಸಲ್ಮಾನ್ ಖಾನ್, ಬಿಲ್ ಗೇಟ್ಸ್, ಮಾರ್ಕ್ ಜುಕರ್‌ಬರ್ಗ್, ಸದ್ಗುರು, ಅಕ್ಷಯ್ ಕುಮಾರ್, ಮುಂತಾದ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಆಲಿಯಾ ಭಟ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ರಣಬೀರ್ ಕಪೂರ್, ನೀತು ಕಪೂರ್, ಅನನ್ಯಾ ಪಾಂಡೆ, ಜಾಹ್ನವಿ ಕಪೂರ್, ಶನಯಾ ಕಪೂರ್, ಶ್ರದ್ಧಾ ಕಪೂರ್, ಸೋನಮ್ ಕಪೂರ್ ಅಹುಜಾ, ಅನಿಲ್ ಕಪೂರ್ ಭಾಗಿಯಾಗಿದ್ದರು.
ಡೇವಿಡ್ ಧವನ್, ಎಂಎಸ್ ಧೋನಿ, ರೋಹಿತ್ ಶರ್ಮಾ, ಹಾರ್ದಿಕ್ ನೆಹ್ವಾಲ್, ಹಾರ್ದಿಕ್ ಪಾಂಡ್ಯ ಜಾಫ್ರಿ, ಅಮೀರ್ ಖಾನ್, ಸುಹಾನಾ ಖಾನ್, ರಿಯಾ ಕಪೂರ್, ಕರೀನಾ ಕಪೂರ್ ಖಾನ್, ಸೈಫ್ ಅಲಿ ಖಾನ್, ಸಾರಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್, ಜಾನ್ ಅಬ್ರಹಾಂ, ಕರಿಷ್ಮಾ ಕಪೂರ್, ಅಟ್ಲೀ, ರಾಮ್ ಚರಣ್, ಮನೀಶ್ ಮಲ್ಹೋತ್ರಾ, ಮಾಧುರಿ ದೀಕ್ಷಿತ್ ನೇನೆ, ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಇತರರ ಇದ್ದರು.