Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹೊಸದೊಂದು ಸಾಹಸಕ್ಕೆ ಸಾಕ್ಷಿಯಾದ ನಟಿ ಶ್ರಾವ್ಯಾ, ನಟ ಲೋಕೇಂದ್ರ

Public TV
Last updated: March 7, 2023 1:33 pm
Public TV
Share
3 Min Read
FotoJet 23
SHARE

ನಟ, ನಿರ್ದೇಶಕ ಲೋಕೇಂದ್ರ (Lokendra Surya) ಹಾಗೂ ಶ್ರಾವ್ಯಾ ರಾವ್ (Shravya Rao) ಕಾಂಬಿನೇಷನ್ ನ ‘ಅಥಿ ಐ ಲವ್ ಯು’ (Athi I Love You) ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಒಂದೇ ದಿನದಲ್ಲಿ, ಒಂದು ಮನೆಯಲ್ಲಿ ನಡೆಯುವ ಕತೆ ಈ ಚಿತ್ರದಲ್ಲಿದೆ. ಗಂಡ-ಹೆಂಡತಿಯ ನಡುವಿನ ಆಪ್ತ ದೃಶ್ಯಗಳು ಇಲ್ಲಿ ಪ್ರಮುಖವಾಗಿರಲಿದೆ. ಅದು ಬೆಂಗಳೂರಿನ ಮನೆಯಲ್ಲಿ ನಡೆದ ಚಿತ್ರೀಕರಣ. ಬರೋಬ್ಬರಿ ಹನ್ನೊಂದು ನಿಮಿಷದ ದೊಡ್ಡ ದೃಶ್ಯವದು. ಅದೂ ಸಿಂಗಲ್‌ ಶಾಟ್‌ನಲ್ಲಿ ಕಂಪೋಸ್‌ ಮಾಡಲಾಗಿತ್ತು. ಮಲಗಿದ್ದ ಗಂಡ ಹೆಂಡತಿ ಎದ್ದನಂತರದ ದೀರ್ಘವಾದ ಈ ದೃಶ್ಯಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಳ್ಳಲಾಗಿತ್ತು. ಮನೆಯಲ್ಲೇ ವಿವಿಧ ಕೋನಗಳಲ್ಲಿ ಲೈಟಿಂಗ್‌ ವ್ಯವಸ್ಥೆ ರೂಪಿಸಿ, ಕ್ಯಾಮೆರಾ ಚಲನೆಗೆ ಪ್ಲಾನ್‌ ಮಾಡಲಾಗಿತ್ತು. ಅಂದುಕೊಂಡಂತೇ ಈ ದೃಶ್ಯ ಮೂಡಿಬಂದಿದ್ದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ. ಈ ರೀತಿಯ ದೀರ್ಘಾವಧಿಯ ದೃಶ್ಯಗಳು ಚಿತ್ರದುದ್ದಕ್ಕೂ ಮೂಡಿಬರಲಿದೆಯಂತೆ.  ಒಂದು ನಿಮಿಷದ ದೃಶ್ಯವನ್ನು ಕಂಪೋಸ್‌ ಮಾಡುವುದು ಕಷ್ಟದ ಕೆಲಸ. ಇಂಥಾದ್ದರಲ್ಲಿ ಹತ್ತು ನಿಮಿಷಕ್ಕೂ ಅಧಿಕ ಸಮಯದ ದೃಶ್ಯವನ್ನು ಕಟ್ಟುವುದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ಸ್ವತಃ ನಾಯಕನಾಗಿ ನಟಿಸಿ, ನಿರ್ದೇಶನವನ್ನೂ ಮಾಡಿರುವ ಲೋಕೇಂದ್ರ ಸೂರ್ಯ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ನಾಯಕಿ ಶ್ರಾವ್ಯಾ ರಾವ್‌ ಕೂಡಾ ಈ ಚಿತ್ರಕ್ಕಾಗಿ ವಿಶೇಷ ತಯಾರಿ ಮಾಡಿಕೊಂಡು ಕ್ಯಾಮೆರಾ ಮುಂದೆ ನಿಂತಿದ್ದಾರೆ.

Athi I Love You 1

ʻʻದೊಡ್ಡ ದೃಶ್ಯಗಳು ಚಿತ್ರದುದ್ದಕ್ಕೂ ಸಹಜವಾಗಿಯೇ ಕಾಣಸಿಗುತ್ತವೆ, ಕತ್ತರಿಸಿ ಜೋಡಿಸಿದರೂ ಸಿಗದ  ಅನುಭವವನ್ನು ಶಾಟ್ ಕಟ್ ಮಾಡದೆಯೇ ಪರದೆಯ ಮೇಲೆ ತರಬೇಕಾದರೆ, ಕಲಾವಿದರು ತಮ್ಮ ಸಾಮರ್ಥ್ಯವನ್ನು ಸಾಭೀತು ಪಡಿಸಬೇಕಾಗುತ್ತದೆ. ಅಂತಹ ಪ್ರಯತ್ನದಲ್ಲಿ ಶ್ರಾವ್ಯ ಅವರು ನನಗೆ ಉತ್ತಮವಾದ ಸಾಥ್ ನೀಡಿದ್ದಾರೆ.  ಭಾವನಾತ್ಮಕ ದೃಶ್ಯಗಳನ್ನು ಅಲ್ಲಲ್ಲಿ ಸಣ್ಣ ಶಾಟ್‌ಗಳಾಗಿ ವಿಭಾಗಿಸಿದರೆ, ಭಾವನೆಗಳನ್ನು ಹಿಡಿದಿಡುವುದು ಕಷ್ಟ. ಆದಕಾರಣ ಕೆಲವು ದೃಶ್ಯಗಳನ್ನು ಒಂದೊಂದೇ ಶಾಟ್‌ಗಳಲ್ಲಿ ಚಿತ್ರಿಸುತ್ತಿದ್ದೇವೆ. ಅದು ಪ್ರೇಕ್ಷಕರಿಗೆ ಮತ್ತಷ್ಟು ಹಿತವೆನಿಸುತ್ತದೆʼʼ ಎನ್ನುವುದು ನಿರ್ದೇಶಕ ಲೋಕೇಂದ್ರ ಸೂರ್ಯ ಅವರ ಮಾತು.

Athi I Love You 4

ʻʻಸಾಕಷ್ಟು ಸಿನಿಮಾಗಳಲ್ಲಿ ನಾನು ಅಭಿನಯಿಸಿದ್ದೇನೆ. ಎಲ್ಲವೂ ನನಗೆ ಇಷ್ಟವಾದವುಗಳೇ, ಆದರೆ, ಅಥಿ ಐ ಲವ್ ಯು ಚಿತ್ರದಲ್ಲಿ ನಾನು ಬೇರೊಂದು ಬಗೆಯಲ್ಲಿ ಅನುಭವ ಪಡೆದುಕೊಳ್ಳುತ್ತಿದ್ದೇನೆ. ಈ ಚಿತ್ರದ ಚಿತ್ರೀಕರಣ ನನಗೊಂದು ವಿಷೇಶವಾದ ಅನುಭವ ನೀಡುತ್ತಿದೆ. ನಿರ್ದೇಶಕ ಲೋಕೇಂದ್ರ ಸೂರ್ಯ ಅವರ ಜೊತೆ ಅಭಿನಯಿಸುವುದರ ಜೊತೆಗೆ, ಅವರ ನಿರ್ದೇಶನದ ರೀತಿಯೂ ಹೊಸತನದಿಂದ ಕೂಡಿದೆ. ಅಥಿ ಐ ಲವ್ ಯು ನನ್ನ ಚಿತ್ರ ಗುಚ್ಚದಲ್ಲಿ ಒಂದೊಳ್ಳೆ ಚಿತ್ರವಾಗುತ್ತದೆ.“ ಎಂದು ನಟಿ ಶ್ರಾವ್ಯ ರಾವ್ ಹೇಳಿದರು.  ಇದನ್ನೂ ಓದಿ:ಬರ್ತ್‌ಡೇ ಬಗ್ಗೆ ಅಪ್‌ಡೇಟ್ ನೀಡಿದ ರಾಧಿಕಾ ಪಂಡಿತ್

Athi I Love You 2

ನಾನು ಈ ಬಾರಿ ಚಿತ್ರದ ನಿರ್ಮಾಣದಲ್ಲಿ ತುಂಬಾ ಸಂತಸವನ್ನು ಹೊಂದಿದ್ದೇನೆ, ಒಂದೊಳ್ಳೆ ಚಿತ್ರದ ನಿರ್ಮಾಣ ನನ್ನ ಬ್ಯಾನರ್ ನಲ್ಲಿ ನಡೆಯುತ್ತಿರುವುದು ನನಗೆ ಮತ್ತಷ್ಟು ಸಂತಸವನ್ನು ತಂದುಕೊಟ್ಟಿದೆ. ಚಿತ್ರೀಕರಣದ ವೇಳೆಯಲ್ಲಿ ಕೆಲವು ದೃಶ್ಯಗಳು ನನಗೆ ತುಂಬಾ ಮಜಾ ಎನಿಸಿದೆ. ನಾನು ಅದೆಷ್ಟು ಅನುಭವಿಸಿದ್ದೇನೆ ಅನ್ನೋದನ್ನು ಪರದೆಯ ಮೇಲೆ ಚಿತ್ರ ವೀಕ್ಷಣೆ ಮಾಡಿದರೆ ಗೊತ್ತಾಗುತ್ತದೆ. ಎಲ್ಲಾ ಅಂದುಕೊಂಡತೆ ಚಿತ್ರದ ಫಸ್ಟ್ ಕಾಪಿ ರೆಡಿಯಾದ ಕೂಡಲೇ ಬಿಡುಗಡೆಗೆ ತಡ ಮಾಡುವುದಿಲ್ಲ. ಮೇ ಮೊದಲ ವಾರದಲ್ಲೇ ಬಿಡುಗಡೆ ಮಾಡುತ್ತೇವೆ. ಆದಷ್ಟು ಬೇಗ ಈ ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕಬೇಕು ಎನ್ನುವ ತವಕ ನನ್ನದಾಗಿದೆʼʼ ಎಂದು ನಿರ್ಮಾಪಕ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ತಮ್ಮ ಸಂತೋಷವನ್ನು ಹೇಳಿಕೊಂಡರು. ಇನ್ನು ಕುಗ್ರಾಮ ಚಿತ್ರದ ನಟಿ ಋತು ಚೈತ್ರಾ ಅವರೇ ವಸ್ತ್ರ ವಿನ್ಯಾಸ ಮಾಡಿದ್ದು, ಜೋಡಿಗಳಿಗೆ ಮತ್ತಷ್ಟು ಅಂದವನ್ನು ಹೆಚ್ಚಿಸಿದ್ದಾರೆ.  ಇದೇ ತಿಂಗಳಲ್ಲಿ ಚಿತ್ರದ ಕುಂಬಳ ಕಾಯಿ ಹೊಡೆಯುವ ಯೋಚನೆ ಚಿತ್ರ ತಂಡಕ್ಕಿದೆ.

Athi I Love You 1

ಸೆವೆನ್ ರಾಜ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ, ರೆಡ್ ಅಂಡ್ ವೈಟ್ ಸೆವೆನ್ ರಾಜ್ ʻಅಥಿ ಐ ಲವ್ ಯೂʼ ಚಿತ್ರದಲ್ಲಿ ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆಯ ಜೊತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಅನಂತ್ ಆರ್ಯನ್ ಸಂಗೀತ ಚಿತ್ರಕ್ಕಿದೆ. ನಟಿ ಋತು ಚೈತ್ರ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿರುವುದು ವಿಶೇಷ. ಎನ್. ಓಂಪ್ರಕಾಶ್ ರಾವ್ ಅವರ ಪುತ್ರಿ ಶ್ರಾವ್ಯಾ ರಾವ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

TAGGED:Athi I Love YouLokendra SuryaShravya Raoಅಥಿ ಐ ಲವ್ ಯೂಲೋಕೇಂದ್ರ ಸೂರ್ಯಶ್ರಾವ್ಯಾ ರಾವ್
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
3 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
3 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
6 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
7 hours ago

You Might Also Like

Balochistan 1
Latest

ಪಾಕ್‌ಗೆ ಮತ್ತೆ ಶಾಕ್ – ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನ

Public TV
By Public TV
19 minutes ago
High Court Orders Case Against Madhya Pradesh Minister For Remarks On Colonel Sofiya Qureshi
Court

ಸೋಫಿಯಾ‌ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

Public TV
By Public TV
43 minutes ago
Raichuru Rain
Districts

ರಾಯಚೂರಿನಲ್ಲಿ ವರುಣನ ಆರ್ಭಟ – ಲಕ್ಷಾಂತರ ರೂ.ಮೌಲ್ಯದ ಭತ್ತ ನಾಶ

Public TV
By Public TV
57 minutes ago
Boycott Turkey
Latest

Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ

Public TV
By Public TV
1 hour ago
Koppal Accident 2
Crime

ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿ – 31 ಜನರಿಗೆ ಗಾಯ

Public TV
By Public TV
1 hour ago
baglihar dam India Pakistan sindhu river
Latest

ಪ್ಲೀಸ್‌ ನೀರು ಹರಿಸಿ – ಸಿಂಧೂ ಜಲ ಒಪ್ಪಂದವನ್ನು ಪರಿಶೀಲಿಸುವಂತೆ ಪಾಕ್‌ ಪತ್ರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?