ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶ್ರುತಿ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಹೊಲಕ್ಕಿಳಿದು ಉಳುಮೆ ಮಾಡಲು ಆರಂಭಿಸಿದ್ದಾರೆ. ತಾನು ಕೃಷಿ ಮಾಡುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

View this post on Instagram
ಸಿನಿಮಾಗಳಿಂದ ಬ್ರೇಕ್ ಪಡೆದು ತಮ್ಮ ಹೊಲದಲ್ಲಿ ಕೃಷಿ ಕೆಲಸ ಮಾಡಿದ್ದಾರೆ. ನೇಗಿಲು ಹಿಡಿದು ಉಳುಮೆ ಮಾಡುತ್ತಿರುವ ಶ್ರುತಿಗೆ ಮಗಳು ಗೌರಿ ಮತ್ತು ತಾಯಂದಿರು ಕೂಡ ಸಾಥ್ ನೀಡಿದ್ದಾರೆ. ನಾನೇ ಉತ್ತಿ ಬಿತ್ತಿ ಬೆಳೆಯಬೇಕೆಂಬುದು ನನ್ನ ಬಹುವರ್ಷದ ಆಸೆ. ಭಗವಂತನಿಗೆ ಕೋಟಿ ನಮನಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ನಟಿ ಶ್ರುತಿ ವಿಡಿಯೋ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

