ಸೌತ್ ಬೆಡಗಿ ಶ್ರುತಿ ಹಾಸನ್ (Shruti Haasan) ಇದೀಗ ತಮ್ಮ 37ನೇ ಹುಟ್ಟುಹಬ್ಬದ (Birthday)ಸಂಭ್ರಮದಲ್ಲಿದ್ದಾರೆ. ತಮ್ಮ ಬರ್ತಡೇಯನ್ನು ಬಾಯ್ಫ್ರೆಂಡ್ ಜೊತೆ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.
ಬಹುಭಾಷಾ ನಟಿ ಶ್ರುತಿ ಹಾಸನ್ ತಮ್ಮ ಹುಟ್ಟುಹಬ್ಬವನ್ನ ಸಡಗರದಿಂದ ಆಚರಿಸಿಕೊಂಡಿದ್ದಾರೆ. ಬಾಯ್ಫ್ರೆಂಡ್ ಶಾಂತನು ಹಜಾರಿಕಾ (Shantanu Hajarika), ಶ್ರುತಿ ಹುಟ್ಟಿದ ದಿನವನ್ನು ಗ್ರ್ಯಾಂಡ್ ಆಗಿ ಆಚರಣೆ ಮಾಡಿದ್ದಾರೆ. ನಟಿಯ ಹುಟ್ಟುಹಬ್ಬದಲ್ಲಿ ಕೆಲ ಆಪ್ತರು ಕೂಡ ಭಾಗವಹಿಸಿದ್ದಾರೆ.
ಸಾಕಷ್ಟು ವರ್ಷಗಳಿಂದ ಶ್ರುತಿ ಮತ್ತು ಶಾಂತನು ಡೇಟಿಂಗ್ ಮಾಡ್ತಿದ್ದಾರೆ. ಇಬ್ಬರು ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದಾರೆ. ಸದ್ಯದಲ್ಲೇ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿಯೂ ಇದೆ. ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ರಶ್ಮಿಕಾ ಮಂದಣ್ಣ ಪಾರ್ಟಿ
View this post on Instagram
ಇನ್ನೂ ಹೊಂಬಾಳೆ ಸಂಸ್ಥೆ ನಿರ್ಮಾಣದ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ `ಸಲಾರ್’ (Salar Film) ಸಿನಿಮಾದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ಗಾಗಿ ಕಾಯ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k