ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ (Bigg Boss) ಮಾಜಿ ಸ್ಪರ್ಧಿ ಶುಭಾ ಪೂಂಜಾ(Shubha Poonja) ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ (Udupi) ಮೂಲದ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ ಅವರು ಕೆಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದರು. ನಂತರ 2022ರ ಜನವರಿ 5 ರಂದು ಶುಭಾ ಪೂಂಜಾ ಅವರ ಸ್ವಂತ ಊರಿನಲ್ಲಿ ಅತ್ಯಂತ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಈಗ ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ (Mutual Consent) ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಪ್ರಕ್ರಿಯೆಯ ಭಾಗವಾಗಿ ಇಂದು ಅಥವಾ ಮುಂದಿನ ವಿಚಾರಣೆಯ ದಿನದಂದು ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಜು.5ರಂದು ಪ್ರೇಯಸಿ ಗೌರಿ ಜೊತೆ ಆಮೀರ್ ಖಾನ್ 3ನೇ ಮದುವೆ

ನಾಲ್ಕು ವರ್ಷಗಳ ಸುಂದರ ಸಂಸಾರದಲ್ಲಿ ಹಠಾತ್ತನೆ ಇಂತಹ ಬಿರುಕು ಮೂಡಲು ನಿಖರವಾದ ಕಾರಣವೇನು ಎಂಬುದು ಇನ್ನು ಅಧಿಕೃತವಾಗಿ ಹೊರಬಂದಿಲ್ಲ. ಈ ಕುರಿತು ಮಾಧ್ಯಮಗಳು ಸಂಪರ್ಕಿಸಿದಾಗ, ವಿಚ್ಛೇದನಕ್ಕೆ ಕಾರಣವನ್ನು ಬಹಿರಂಗಪಡಿಸಲು ಸುಮಂತ್ ಬಿಲ್ಲವ ನಿರಾಕರಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ನಿರ್ಧಾರವನ್ನು ಗೌರವಿಸಬೇಕಾಗಿ ಅವರು ಕೋರಿದ್ದಾರೆ. ಇದನ್ನೂ ಓದಿ: ಚಿನ್ನಿಬಾಂಬ್‍ಗೆ ಲವ್ ಲೆಟರ್ ಕಳುಹಿಸುವುದಕ್ಕೆ ಹೇಳಿ ಬಿಗ್‍ಬಾಸ್













