Connect with us

Bengaluru City

2ನೇ ಮಗುವಿನ ನಿರೀಕ್ಷೆಯಲ್ಲಿ ದ್ರೌಪದಿ ಪಾತ್ರಧಾರಿಯ ಸ್ನೇಹ

Published

on

ಚೆನ್ನೈ: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಮುನಿರತ್ನ ಕುರುಕ್ಷೇತ್ರ’ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಿದ ನಟಿ ಸ್ನೇಹ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅಲ್ಲದೆ ಈಗ ಅವರು ಸೀಮಂತ ಕಾರ್ಯಕ್ರಮ ಮಾಡಿಸಿಕೊಂಡಿದ್ದಾರೆ.

ಸ್ನೇಹ ಅವರು ಸಾಂಪ್ರದಾಯಿಕವಾಗಿ ತಮ್ಮ ಸೀಮಂತ ಕಾರ್ಯಕ್ರಮವನ್ನು ಮಾಡಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ನೇಹ ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು. ಸದ್ಯ ಸೀಮಂತ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೇ 11, 2012ರಲ್ಲಿ ಸ್ನೇಹ ತಮ್ಮ ಗೆಳೆಯ ಪ್ರಸನ್ನ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2009ರಲ್ಲಿ ‘ಅಚಮಂಡು ಅಚಾಮುಂಡು’ ಚಿತ್ರದ ಚಿತ್ರೀಕರಣದ ವೇಳೆ ಇಬ್ಬರು ಪ್ರೀತಿಸಲು ಶುರು ಮಾಡಿದ್ದರು. ಬಳಿಕ ಇಬ್ಬರು ರಿಲೇಶಿನ್‍ಶಿಪ್‍ನಲ್ಲಿ ಇದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ನಂತರ ಇಬ್ಬರು ಪೋಷಕರನ್ನು ಒಪ್ಪಿಸಿ ಮದುವೆಯಾಗಿದ್ದರು.

ಮದುವೆಯಾಗಿ ಮೂರು ವರ್ಷಗಳ ನಂತರ ಸ್ನೇಹ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ‘ವಿಹಾನ್’ ಎಂದು ನಾಮಕರಣ ಮಾಡಿದ್ದರು. ಈ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಅಭಿಮಾನಿಗಳು ದಂಪತಿ ಶುಭಾಶಯ ತಿಳಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *