Exclusive: ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಸೋನಲ್, ತರುಣ್ ಮದುವೆ

Public TV
1 Min Read
Tarun Sudhir Sonal 1

ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮತ್ತು ಸೋನಲ್ (Sonal) ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್‌ ದಂಪತಿ ಮದುವೆಯಾಗಲಿದ್ದಾರೆ. ಇದನ್ನೂ ಓದಿ:‘ಕರಿಯಾ’ ಚಿತ್ರ ರೀ-ರಿಲೀಸ್ ವೇಳೆ ದರ್ಶನ್ ಪುಂಡಾಭಿಮಾನಿಗಳಿಗೆ ಖಾಕಿ ವಾರ್ನಿಂಗ್

sonal

ಸೋನಲ್ ಕ್ರೈಸ್ತ ಧರ್ಮದವರಾಗಿದ್ದು, ಇದೀಗ ಅವರ ಸಂಪ್ರದಾಯದಂತೆ ಸೆ.1ರಂದು ಮಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ. ಮದುವೆ ಆರತಕ್ಷತೆ ಕೂಡ ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ಕುಟುಂಬಸ್ಥರು, ಆಪ್ತರಿಗಷ್ಟೇ ಆಹ್ವಾನ ನೀಡಿದ್ದಾರೆ.

ಇನ್ನೂ ಇದೇ ಆ.11ರಂದು ತರುಣ್ ಮತ್ತು ಸೋನಲ್ ಹಿಂದೂ ಪದ್ಧತಿಯಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಈ ಮದುವೆಗೆ ಸ್ಯಾಂಡಲ್‌ವುಡ್ ನಟ, ನಟಿಯರು ಸಾಕ್ಷಿಯಾಗಿದ್ದರು.

Share This Article