CinemaKarnatakaLatestMain PostSandalwood

‘ಪಾಪ್ ಕಾರ್ನಾ’ ಮಾರಿ ಸಖತ್ ಟ್ರೋಲ್ ಆದ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್

ಬಾಲಿವುಡ್ ನಟಿ ದಿವಗಂತ ಶ್ರೀದೇವಿ (Sridevi) ಪುತ್ರಿ ಜಾನ್ವಿ ಕಪೂರ್ ಸಖತ್ ಟ್ರೋಲ್ ಆಗುತ್ತಿದ್ದಾರೆ. ಟ್ರೋಲಿಗರು ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ. ಜಾನ್ವಿ ಕಪೂರ್ ಇತ್ತೀಚಿಗಷ್ಟೇ ಮಿಲಿ ಚಿತ್ರದ ಪ್ರಚಾರಕ್ಕಾಗಿ ದೆಹಲಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಮಲ್ಟಿಫ್ಲೆಕ್ಸ್‍ ನಲ್ಲಿ ಪಾಪ್ ಕಾರ್ನ್ (Popcorn) ಮಾರಾಟ ಮಾಡಿದ್ದರು. ಸಿನಿಮಾದ ಈ ವಿಭಿನ್ನ ಪ್ರಚಾರಕ್ಕೆ ಅಭಿಮಾನಿಗಳು ಮೆಚ್ಚಿಕೊಂಡಿದ್ದರೆ, ಉಳಿದಂತೆ ಟ್ರೋಲಿಗರು ಕಾಲೆಳೆದಿದ್ದರು.

ಜಾನ್ವಿ ಕಪೂರ್ (Janhvi Kapoor) ಸದ್ಯ ಮಿಲಿ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದಾರೆ. ಈಗಾಗಲೇ ಜಾನ್ವಿ ಕೆಲ ಸಿನಿಮಾಗಳನ್ನು ಮಾಡಿದ್ದರು, ಅವರಿಗೆ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಮಿಲಿ ಸಿನಿಮಾ ಅವರ ವೃತ್ತಿ ಬದುಕಿಗೆ ಬ್ರೇಕ್ ನೀಡಬಹುದು ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಅವರು ಭರ್ಜರಿ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಇದೇ ನವೆಂಬರ್ 4 ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಇದನ್ನೂ ಓದಿ: ಬೀದಿ ನಾಯಿ ರಾನುಗೆ ʻಐ ಲವ್‌ ಯೂʼ ಹೇಳಿದ ರಮ್ಯಾ: ರಾನು ಜೊತೆಗಿನ ವರ್ಷದ ನೆನಪು

ಸಿನಿಮಾ ಪ್ರಚಾರಕ್ಕಾಗಿ ಪಾಪ್ ಕಾರ್ನ್ ಮಾರೋದು, ಮತ್ತೊಂದು ಮಾಡೋದು ಸರಿಯಾದದ್ದು ಅಲ್ಲ. ಖ್ಯಾತ ನಟಿ ಮತ್ತು ಖ್ಯಾತ ನಿರ್ಮಾಪಕರ ಪುತ್ರಿಯಾಗಿ ಜಾನ್ವಿ ಪಾಪ್ ಕಾರ್ನ್ ಮಾರುವುದು ಒಂದು ರೀತಿಯಲ್ಲಿ ಗಿಮಿಕ್. ಸಿನಿಮಾ ಚೆನ್ನಾಗಿದ್ದಾರೆ ಟಿಕೆಟ್ ಮಾರಬಹುದು, ಪಾಪ್ ಕಾರ್ನ್ ಅಲ್ಲ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ. ಈ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅಲ್ಲದೇ ಕೆಲವರು ಇನ್ನೂ ಕೆಟ್ಟದ್ದಾಗಿ ಕಾಮೆಂಟ್ ಕೂಡ ಮಾಡಿದ್ದರು.

ಇದು ಹೆಲನ್ ಸಿನಿಮಾದ ರಿಮೇಕ್ ಚಿತ್ರವಾಗಿದ್ದು, ಇದೀಗ ಹಿಂದಿಯಲ್ಲಿ ರಿಮೇಕ್ ಆಗಿದೆ. ಈ ಸಿನಿಮಾವನ್ನು ಜಾನ್ವಿ ತಂದೆ ಬೋನಿ ಕಪೂರ್ (Boney Kapoor) ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಟ್ರೇಲರ್ ರಿಲೀಸ್ ಮಾಡಿದ್ದು, ಒಳ್ಳೆಯ ಮಾತುಗಳು ಕೂಡ ಕೇಳಿ ಬಂದಿವೆ. ಸನ್ನಿ ಕೌಶಲ್ಯ ಹಾಗೂ ಮನೋಜ್ ಪಾಹ್ವಾ ಸೇರಿದಂತೆ ಹಲವರು ಈ ಸಿನಿಮಾದ ತಾರಾಗಣದಲ್ಲಿ ಇದ್ದಾರೆ.

Live Tv

Leave a Reply

Your email address will not be published. Required fields are marked *

Back to top button