ಅಲಯನ್ಸ್ ವಿವಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರೀಲೀಲಾ (Shrileela) ತಾಯಿ ಸ್ವರ್ಣಲತಾ ಅವರನ್ನು ಬಂಧಿಸಲು ಆನೇಕಲ್ ಪೊಲೀಸರು ಸಿದ್ಧತೆ ನಡೆಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ವರ್ಣಲತಾ ಎಸ್ಕೇಪ್ ಆಗಿದ್ದಾರೆ. ಕೋರಮಂಗಲದಲ್ಲಿರುವ ಸ್ವರ್ಣಲತಾ ಮನೆಗೆ ಬೀಗ ಹಾಕಿದ್ದು, ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಹೀಗಾಗಿ ಬಂಧನದಿಂದ ತಪ್ಪಿಸಿಕೊಳ್ಳಲು ಅವರು ಕೇರಳಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ.
ತಮಗೆ ಬೇಲ್ ಸಿಗುವತನಕ ಪೊಲೀಸರ ಕೈಗೆ ಸಿಗದಂತೆ ಸ್ವರ್ಣಲತಾ (Swarnalatha) ಎಸ್ಕೇಪ್ ಆಗಿದ್ದು, ಆನೇಕಲ್ ಪೊಲೀಸರು ಅವರಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ಬಂಧನ ಮಾಡದಂತೆ ಪ್ರಭಾವಿ ಸಚಿವರಿಂದಲೂ ಕೂಡ ಪೊಲೀಸರ ಮೇಲೆ ಸ್ವರ್ಣಲತಾ ಒತ್ತಡ ಹೇರುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಆನೇಕಲ್ ಪೊಲೀಸರಿಗೆ ಹಲವು ಬಾರಿ ಪ್ರಭಾವಿ ಸಚಿವರು ಕರೆ ಕೂಡ ಮಾಡಿದ್ದಾರೆ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ:ನಾಗಚೈತನ್ಯ- ಸಮಂತಾ ಬ್ರೇಕಪ್ ಬಗ್ಗೆ ಕೊನೆಗೂ ಮೌನ ಮುರಿದ ನಟ ನಾಗಾರ್ಜುನ್
ಖ್ಯಾತ ರಾಜಕಾರಣಿಯೊಬ್ಬರಿಗೆ ಅಲೆಯನ್ಸ್ (Alliance) ವಿಶ್ವ ವಿದ್ಯಾಲಯ ಮಾರಿಸಲು ಸ್ವರ್ಣಲತಾ ಮುಂದಾಗಿದ್ದರು ಎನ್ನುವ ಕಾರಣಕ್ಕಾಗಿ ಅವರ ಮೇಲೆ ದೂರು ದಾಖಲಾಗಿದೆ. ಇದರ ಹಿಂದೆ ನೂರಾರು ಕೋಟಿ ಡೀಲ್ ಕೂಡ ಇದೆ ಎಂದು ಹೇಳಲಾಗುತ್ತಿದೆ. ಮಧುಕರ್ ಅಂಗೂರ್ (Madhukar Angur) ಅವರಿಂದ ಯುನಿವರ್ಸಿಟಿ ಮಾರಾಟಕ್ಕೆ ಸ್ವರ್ಣಲತಾ ಡೀಲ್ ಕುದುರಿಸಿದ್ದರು ಎಂದು ಹೇಳಲಾಗಿದ್ದು, ಮಧುಕರ್ ಮತ್ತು ಸ್ವರ್ಣಲತಾ ಗೂಂಡಾಗಳ ಜೊತೆ ವಿವಿಗೆ ನುಗ್ಗಿ ಸಿಬ್ಬಂದಿಗೆ ಮತ್ತು ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ. ಸೆ.10ರಂದು ಬಂದೂಕು ಹಿಡಿದ ಗೂಂಡಾಗಳ ಜೊತೆ ಸ್ವರ್ಣಲತಾ ವಿವಿಗೆ ನುಗ್ಗಿದ್ದರು ಎನ್ನಲಾಗುತ್ತಿದೆ.
ಈ ಕುರಿತು ಆನೇಕಲ್ (Anekal) ಪೊಲೀಸ್ ಠಾಣೆಗೆ ದೂರು ನೀಡಿರುವ ವಿವಿ ರಿಜಿಸ್ಟಾರ್ ಡಾ. ನಿವೇದಿತಾ ಮಿಶ್ರಾ (Nivedita Mishra), ‘ಸೆ.10 ರಂದು ಸ್ವರ್ಣಲತಾ ಮತ್ತು ಮಧುಕರ್ ಅಂಗೂರು ಜೊತೆಯಾಗಿ ಗೂಂಡಾಗಳ ಜೊತೆ ವಿವಿಗೆ ನುಗ್ಗಿದ್ದಾರೆ. ಗೂಂಡಾಗಳ ಬಳಿ ಬಂದೂಕು ಕೂಡ ಇದ್ದವು. ವಿವಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಹೆದರಿಸುವಂತಹ ಮತ್ತು ಬಂದೂಕಿನಿಂದ ಶೂಟ್ ಮಾಡುವುದಾಗಿ ಹೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ಮಧುಕರ್ ಬಂಧನವಾಗಿದ್ದು, ಸ್ವರ್ಣಲತಾ ಅವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.