ಶೃತಿ ಹರಿಹರನ್ ಮದ್ವೆ ರಹಸ್ಯ ಬಯಲು – ದೂರಿನಲ್ಲಿ ಮದುವೆ ಬಗ್ಗೆ ಉಲ್ಲೇಖ ಮಾಡಿದ ರಾಟೆ ಹುಡುಗಿ

Public TV
2 Min Read
sruthihariharan2 1533985171

ಬೆಂಗಳೂರು: ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿರುವ ನಟಿ ಶೃತಿ ಹರಿಹರನ್ ಅವರಿಗೆ ಮದುವೆ ಆಗಿದೆ ಎಂಬ ಅಂಶ ಅವರು ಪೊಲೀಸರಿಗೆ ನೀಡಿರುವ ದೂರಿನ ಪ್ರತಿಯಲ್ಲಿ ಬಹಿರಂಗವಾಗಿದೆ.

ಹೌದು, ಇಂದು ನಟಿ ಶೃತಿ ಹರಿಹರನ್ ಅವರು ಸುಮಾರು 5 ಪುಟಗಳಲ್ಲಿ ಅರ್ಜುನ್ ಸರ್ಜಾ ಅವರ ವಿರುದ್ಧ ದೂರು ನೀಡಿದ್ದರು. ಇದರಲ್ಲಿ ತಮ್ಮ ಹೆಸರಿನ ವಿಳಾಸದೊಂದಿಗೆ ವೈಫ್ ಆಫ್ ರಾಮ್ ಕುಮಾರ್ ಎಂದು ನಮೂದಿಸಿದ್ದಾರೆ. ಇದರೊಂದಿಗೆ ಹರಿಹರನ್ ಅವರಿಗೆ ಮದುವೆ ಆಗಿದೆ ಅಂಶ ಬಹಿರಂಗವಾಗಿದೆ. ಇದಕ್ಕೂ ಮುನ್ನ ನಟಿ ಶೃತಿ ಹರಿಹರನ್ ಅವರಿಗೆ ಮದುವೆ ಆಗಿದೆಯೇ ಇಲ್ಲವೇ ಎಂಬ ಸಂಗತಿ ಇಷ್ಟು ದಿನಗಳ ಕಾಲ ಗುಟ್ಟಾಗಿಯೇ ಇತ್ತು. ಆದರೆ ಮೀಟೂ ಅಭಿಯಾನದ ಭಾಗವಾಗಿ ನೀಡಿದ ದೂರಿನಿಂದ ಶೃತಿ ಅವರಿಗೆ ಮದುವೆ ಆಗಿದೆ ಎಂಬ ಅಂಶ ತಿಳಿದು ಬಂದಿದೆ.  ಇದನ್ನು ಓದಿ: ಅಸಹ್ಯವಾಗಿ ನೋಡಿ ಹಿಂಭಾಗದಿಂದ ಅಪ್ಪಿಕೊಂಡ್ರು- ಶೃತಿ ದೂರಿನಲ್ಲಿ ಬೆಚ್ಚಿ ಬೀಳೋ ಆರೋಪ

sruthi copy

ರಾಮ್ ಕುಮಾರ್ ಕೂಡ ನೃತ್ಯ ಕಲಾವಿದ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ರಾಮ್ ಕುಮಾರ್ ಕೇರಳದ ಪ್ರಸಿದ್ಧ ಕಲರಿ ಪಟ್ಟು ಎಂದು ತಿಳಿದು ಬಂದಿದೆ. ಈ ಹಿಂದೆ ಶೃತಿ ಸಹ ರಾಮ್ ಕುಮಾರ್ ಜತೆ ರಿಲೇಷನ್ ಶಿಪ್ ನಲ್ಲಿರುವುದಾಗಿ ಹೇಳಿಕೊಂಡಿದ್ದರು. ಆದರೆ ಎಲ್ಲಿಯೂ ತಾವು ಮದುವೆಯಾಗಿರುವುದಾಗಿ ಶೃತಿ ಹೇಳಿರಲಿಲ್ಲ. ಶ್ರುತಿ ಹರಿಹರನ್ ರಾಮ್ ಕುಮಾರ್ ಜೊತೆಯಲ್ಲಿ ಮೊದಲ ಬಾರಿಗೆ ‘ಪ್ರೇಮ’ ಎಂಬ ವಿಡಿಯೋ ಹಾಡಿನಲ್ಲಿ ಇಬ್ಬರು ಅಭಿನಯ ಮಾಡಿದ್ದರು.

Sruthi Arjun 5

ಶೃತಿ ಅವರು ತಮ್ಮ ದೂರಿನಲ್ಲಿ ಹೆಬ್ಬಾಳ ಹಾಗೂ ದೇವನಹಳ್ಳಿಯಲ್ಲಿ ನಡೆದ ಚಿತ್ರೀಕರಣದ ಸಂದರ್ಭದಲ್ಲಿ ತನಗಾದ ಅನ್ಯಾಯದ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಸಿನಿಮಾ ಚಿತ್ರೀಕರಣದ ವೇಳೆ ನನ್ನ ದೇಹದ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದು, ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದರು. ಲೈಂಗಿಕ ತೃಷೆಗಾಗಿ ರೆಸಾರ್ಟ್ ಗೆ ಕರೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೇ 2015 ರಲ್ಲಿ ಚಿತ್ರೀಕರಣಗೊಂಡ `ವಿಸ್ಮಯ’ ಚಿತ್ರದಲ್ಲಿ ಅರ್ಜುನ್ ಸರ್ಜಾ ಅವರ ಪತ್ನಿಯಾಗಿ ಶೃತಿ ಅಭಿನಯಿಸಿದ್ದರು. ಈ ವೇಳೆ ನಡೆದ ಘಟನೆ ಬಗ್ಗೆ ಶೃತಿ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ARJUN SARJA COMPLAINT

 

Share This Article
Leave a Comment

Leave a Reply

Your email address will not be published. Required fields are marked *