ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಇತ್ತೀಚೆಗೆ ತಾವೂ ಗರ್ಭಿಣಿ ಎಂದು ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಶ್ರುತಿ ಹರಿಹರನ್ ಅವರು ಸೀಮಂತ ಸಂಭ್ರಮದ ವಿಡಿಯೋವನ್ನು ಪ್ರಕಟಿಸಿದ್ದಾರೆ.
ನಟಿ ಶ್ರುತಿ ಹರಿಹರನ್ ಅವರು ಬೇಬಿ ಶವರ್ ಕಾರ್ಯಕ್ರಮದ ಕೆಲವು ಫೋಟೋಗಳನ್ನು ಒಂದು ಸ್ಲೈಡ್ ಮಾಡಿ ಆ ವಿಡಿಯೋವನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಶ್ರುತಿ ಬಿಳಿ ಬಣ್ಣದ ಗೌನ್ ಧರಿಸಿದ್ದು, ವಿಭಿನ್ನವಾಗಿ ಡಿಸೈನ್ ಆಗಿರುವ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚಾರಣೆ ಮಾಡಿದ್ದಾರೆ. ಜೊತೆಗೆ ಅವರ ಸ್ನೇಹಿತರ ಜೊತೆ ಫೋಟೋಗೆ ಪೋಸ್ಟ್ ಕೊಟ್ಟಿದ್ದು, ಬೇಬಿ ಶವರ್ ಕಾರ್ಯಕ್ರಮವನ್ನು ಸಖತ್ ಎಂಜಾಯ್ ಮಾಡಿದ್ದಾರೆ.
ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದು, ಈ ಸಂಭ್ರಮ, ಸಡಗರಕ್ಕೆ ಕಾರಣರಾದ ಸ್ನೇಹಿತರು ಮತ್ತು ಕುಂಟುಂಬದ ಕೆಲವರಿಗೆ ಶ್ರುತಿ ಹರಿಹರನ್ ಧನ್ಯವಾದ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ಶ್ರುತಿ ಬ್ಲರ್ ಆಗಿ ಕ್ಲಿಕ್ಕಿಸಿಕೊಂಡಿರುವ ಫೋಟೋವೊಂದನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, “ಈ ಸರ್ಕಸ್‍ಗೆ ನಿನಗೆ ಸ್ವಾಗತ ಪುಟ್ಟ. ನಿನ್ನನ್ನು ನೋಡಲು ನಮಗೆ ಕಾಯಲು ಆಗುತ್ತಿಲ್ಲ. ನಿನ್ನ ತಂದೆ ರಾಮ್ ಕಳಾರಿ ಉತ್ಸುಕರಾಗಿದ್ದಾರೆ” ಎಂದು ಬರೆದುಕೊಂಡಿದ್ದರು. ಈ ಮೂಲಕ ಶ್ರುತಿ ಅವರು ತಾವೂ ಗರ್ಭಿಣಿ ಎಂಬುದನ್ನು ಅಧಿಕೃತವಾಗಿ ಹೇಳಿಕೊಂಡಿದ್ದರು.
https://www.instagram.com/p/Bz-rVWjJHRH/
ನಟಿ ಶ್ರುತಿ ಹರಿಹರನ್ ಅವರು ತಾನು ಮದುವೆಯಾಗಿದ್ದೇನೆ ಎನ್ನುವ ವಿಚಾರವನ್ನು ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ನಟ ಅರ್ಜುನ್ ಸರ್ಜಾ ಅವರ ವಿರುದ್ಧ ಮೀಟೂ ಆರೋಪ ಕೇಳಿ ಬಂದ ಸಂದರ್ಭದಲ್ಲಿ ದೂರು ನೀಡುವಾಗ ಮದುವೆಯಾಗಿದ್ದ ವಿಚಾರ ಬಹಿರಂಗವಾಗಿತ್ತು. ಶ್ರುತಿ ಡ್ಯಾನ್ಸ್ ಮಾಸ್ಟರ್ ಮತ್ತು ಪ್ರಸಿದ್ಧ ಕಲರಿ ಪಟ್ಟು ಕಲಾವಿದರಾಗಿರುವ ರಾಮ್ ಕುಮಾರ್ ಅವರನ್ನು ಮದುವೆಯಾಗಿದ್ದಾರೆ.
https://www.instagram.com/p/B0DCgkRnLhY/