Connect with us

Bengaluru City

ಮುದ್ದು ಮಗಳ ಜೊತೆ ನಟಿ ಶ್ರುತಿ ಹರಿಹರನ್

Published

on

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ತಮ್ಮ ಮುದ್ದು ಮಗಳ ಜೊತೆಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇತ್ತೀಚೆಗೆ ಶ್ರುತಿ ಪ್ರತಿಭಟನೆಯಲ್ಲಿ ಭಾಗವಹಿಸಲು ನಗರದ ಟೌನ್‍ಹಾಲ್‍ನಲ್ಲಿ ಆಗಮಿಸಿದ್ದರು. ಶ್ರುತಿ ತಮ್ಮ ಪತಿ ರಾಮ್ ಹಾಗೂ ಮಗಳು ಜಾನಕಿ ಜೊತೆ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಮೂವರು ಒಟ್ಟಿಗಿರುವ ಫೋಟೋಗಳು ಸೆರೆ ಹಿಡಿಯಲಾಗಿದ್ದು, ಇದೀಗ ವೈರಲ್ ಆಗುತ್ತಿದೆ.

ಅಕ್ಟೋಬರ್ 7ರಂದು ಶ್ರುತಿ ತಮ್ಮ ಮಗಳ ನಾಮಕರಣವನ್ನು ಸಾಂಪ್ರದಾಯಿಕವಾಗಿ ಕುಟುಂಬಸ್ಥರ ಜೊತೆ ಮಾಡಿದ್ದರು. ರಾಮ್ ಈ ಕಾರ್ಯಕ್ರಮದಲ್ಲಿ ತಮ್ಮ ಮಗಳನ್ನು ಎತ್ತಿಕೊಂಡು ಶ್ರುತಿ ಹಾಗೂ ಕುಟುಂಬಸ್ಥರ ಜೊತೆ ಕುಳಿತಿರುವ ಫೋಟೋವನ್ನು ಇನ್‍ಸ್ಟಾದಲ್ಲಿ ಶೇರ್ ಮಾಡಿದ್ದರು.

ಶ್ರುತಿ ಹಾಗೂ ರಾಮ್ ತಮ್ಮ ಮಗಳಿಗೆ ‘ಜಾನಕಿ’ ಎಂದು ಹೆಸರಿಟ್ಟಿದ್ದರು. ಕುಟುಂಬಸ್ಥರ ಸಮ್ಮುಖದಲ್ಲೇ ಸಾಂಪ್ರದಾಯಿಕವಾಗಿ ಈ ಕಾರ್ಯಕ್ರಮ ನಡೆದಿತ್ತು. ಶ್ರುತಿ ಈವರೆಗೂ ತಮ್ಮ ಮಗಳ ಫೋಟೋವನ್ನು ರಿವೀಲ್ ಮಾಡಿಲ್ಲ. ಈ ಮೊದಲು ಅವರು ತಮ್ಮ ಮಗಳ ಕಾಲುಗಳ ವಿಡಿಯೋವನ್ನು ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದರು. ಮೊದಲ ಬಾರಿಗೆ ಅವರ ಮಗಳ ಫೋಟೋ ರಿವೀಲ್ ಆಗಿದೆ.

ಶ್ರುತಿ ಹರಿಹರನ್ ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

Click to comment

Leave a Reply

Your email address will not be published. Required fields are marked *