ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿ ಅವರು ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ್ದಾರೆ.
ನಟಿ ಸುಧಾರಾಣಿ ಅವರು ತಾವು ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಲ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ನೋಡಿದ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಸುಧಾರಾಣಿ ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.
Advertisement
Advertisement
ಸುಧಾರಾಣಿ ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ಹಾಕಿ ಅದಕ್ಕೆ, “ಕನ್ನಡ ಚಿತ್ರರಂಗದಲ್ಲಿ ನನ್ನ ಸೇವೆಗೆ ಪ್ರತಿಷ್ಠಿತ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ್ದೇನೆ. ಹಳೆಯ ಪ್ರಶಸ್ತಿಗಳಲ್ಲಿ ಒಂದಾಗಿದೆ ಎಂಬ ಪರಂಪರೆಯನ್ನು ಹೊಂದಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಗೌರವ ಆಗುತ್ತಿದೆ” ಎಂದು ಪೋಸ್ಟ್ ಮಾಡಿದ್ದಾರೆ.
Advertisement
Advertisement
1986ರಲ್ಲಿ ಸುಧಾರಾಣಿ ಆನಂದ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಇದಾದ ಬಳಿಕ ಅವರು ರಣರಂಗ, ಕೃಷ್ಣ ನೀ ಕುಣಿದಾಗ, ಪಂಚಮವೇದ, ಮೈಸೂರು ಮಲ್ಲಿಗೆ, ಮಣ್ಣಿನ ದೋಣಿ, ಮನೆದೇವ್ರು, ಅನುರಾಗ ಸಂಗಮ ಹಾಗೂ ಸ್ಪರ್ಶ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ ಅಲ್ಲದೆ ತಮಿಳು, ತೆಲುಗು ಹಾಗೂ ಮಲೆಯಾಳಂ ಚಿತ್ರದಲ್ಲೂ ನಟಿಸಿದ್ದಾರೆ.
ಸುಧಾರಾಣಿ ಅವರು ‘ಪಂಚಮ ವೇದ’ ಚಿತ್ರಕ್ಕೆ ಕರ್ನಾಟಕ ರಾಜ್ಯ ಸಿನಿಮಾ ಪ್ರಶಸ್ತಿ, ‘ಮೈಸೂರು ಮಲ್ಲಿಗೆ’ ಚಿತ್ರಕ್ಕೆ ಕರ್ನಾಟಕ ರಾಜ್ಯ ಸಿನಿಮಾ ಪ್ರಶಸ್ತಿ ಹಾಗೂ ದಕ್ಷಿಣ ಫಿಲಂಫೇರ್ ಪ್ರಶಸ್ತಿ, ‘ಸ್ಪರ್ಶ’ ಹಾಗೂ ‘ವಾಸ್ತು ಪ್ರಕಾರ’ ಚಿತ್ರಕ್ಕೆ ಫಿಲಂಫೇರ್ ಪ್ರಶಸ್ತಿ ಪಡೆದಿದ್ದಾರೆ.