ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ (Sumalta Ambarish), ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ (BJP) ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.
Advertisement
ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ.
Advertisement
Advertisement
ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಅವರು ಬರೆದಿದ್ದಾರೆ.
Advertisement
ನಿನ್ನೆಯಷ್ಟೇ ಮಂಡ್ಯದಲ್ಲಿ ತಮ್ಮ ಚುನಾವಣೆ ನಿಲುವು ಕುರಿತಂತೆ ಪ್ರಕಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿಕೊಂಡು ತಾವು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದಾರೆ.