ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರಶಸ್ತಿ ವಿಭಾಗದ ಜ್ಯೂರಿಯಾಗಿದ್ದ ಇಸ್ರೇಲಿ ನಿರ್ದೇಶಕ ನದಾಲ್, ಭಾರತದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಇಂತಹ ಅಶ್ಲೀಲ, ಕೆಟ್ಟ ಸಿನಿಮಾವನ್ನು ನಾನು ಯಾವತ್ತೂ ಜ್ಯೂರಿಯಾಗಿ ನೋಡಿಲ್ಲ ಎಂದು ಕಾಮೆಂಟ್ ಮಾಡಿದ್ದರು. ಅವರ ಈ ಮಾತಿಗೆ ಪರ ವಿರೋಧ ಕೂಡ ವ್ಯಕ್ತವಾಗಿತ್ತು. ನದಾಲ್ ಮಾತಿಗೆ ಕೆಲವರು ಆಕ್ಷೇಪನೆ ವ್ಯಕ್ತ ಪಡಿಸಿದ್ದರೆ, ಬಾಲಿವುಡ್ ನಟಿ ಸ್ವರ ಭಾಸ್ಕರ್ ಇಸ್ರೇಲಿ ನಿರ್ದೇಶಕನ ಪರವಾಗಿ ನಿಂತಿದ್ದಾರೆ.
Advertisement
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸ್ವರ, ‘ಸತ್ಯ ಏನು ಅನ್ನುವುದು ಸ್ಪಷ್ಟವಾಗಿ ಜಗತ್ತಿಗೆ ಅರ್ಥವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಸ್ವರ ಭಾಸ್ಕರ್ ಮಾತಿಗೂ ಕೆಲವರು ಆಕ್ಷೇಪ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಸ್ವರ ಪರವಾಗಿಯೇ ಮಾತನಾಡಿದ್ದಾರೆ. ಹಾಗಾಗಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಮತ್ತೊಂದು ರೌಂಡಿನ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್ನಲ್ಲಿ ತಮಿಳು ನಟ ವಿಜಯ್ ಸೇತುಪತಿ
Advertisement
Advertisement
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇಸ್ರೇಲ್ ರಾಯಭಾರಿ ನಾರ್ ಗಿಲೋನ್ (naor gilon ನದಾವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Advertisement
ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ (ನವೆಂಬರ್ 28) ಅದ್ದೂರಿಯಾಗಿ ನಡೆದಿತ್ತು. ಮುಕ್ತಾಯ ಸಮಾರಂಭದಲ್ಲಿ ತೀರ್ಪುಗಾರರ ಮುಖ್ಯಸ್ಥರಾಗಿದ್ದ ಇಸ್ರೇಲ್ನ ಖ್ಯಾತ ನಿರ್ದೇಶಕ ನದಾವ್ ಲಾಪಿಡ್ ದಿ ಕಾಶ್ಮಿರ್ ಫೈಲ್ಸ್ ಸಿನಿಮಾ ವಿರುದ್ಧ ಅಸಮಾಧಾನ ಹೊರಹಾಕಿದರು. `ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿ ತುಂಬಾ ಡಿಸ್ಟರ್ಬ್ ಆಗಿದ್ದೀವಿ. ಇದೊಂದು ಅಶ್ಲೀಲ ಪ್ರಚಾರದ ಸಿನಿಮಾ. ಇಂಥ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ಹೇಳುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.