ಬಾಲಿವುಡ್ ನಟನ ಜೊತೆಗಿನ ಡೇಟಿಂಗ್ ಒಪ್ಪಿಕೊಂಡ ನಟಿ ತಮನ್ನಾ

Public TV
2 Min Read
Tamannaah Bhatia 2

ಡೇಟಿಂಗ್ ವಿಚಾರದಲ್ಲಿ ದಕ್ಷಿಣದ ಖ್ಯಾತ ನಟಿ ತಮನ್ನಾ (Tamannaah) ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಮೊನ್ನೆಯಷ್ಟೇ ಬಾಲಿವುಡ್ ನಟ ವಿಜಯ್ ವರ್ಮಾ (Vijay Varma)  ಡೇಟಿಂಗ್ ವದಂತಿಯನ್ನು ತಮನ್ನಾ ತಳ್ಳಿ ಹಾಕಿದ್ದರು. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ವಿಚಾರಕ್ಕೆ ಅವರು ಸಂದರ್ಶನವೊಂದರಲ್ಲಿ ಮೌನ ಮುರಿದಿದ್ದರು.

tamannaah and vijay varma

ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ವರ್ಮಾ ಜೊತೆ ತಮನ್ನಾ ಲಿಪ್ ಲಾಕ್ ಮಾಡಿಕೊಂಡ ವೀಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ವಿಜಯ್ವರ್ಮಾ ಜೊತೆಗಿನ ಡೇಟಿಂಗ್ (Dating) ವಿಚಾರವನ್ನು ತಳ್ಳಿ ಹಾಕಿದ್ದರು. ನಾವಿಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದೇವೆ. ಇಂಥ ವದಂತಿಗಳು ಎಲ್ಲಾ ಕಡೆ ಹರಿದಾಡುತ್ತಲೇ ಇರುತ್ತದೆ. ಇಂಥ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡುವುದು ಮತ್ತು ಸ್ಪಷ್ಟೀಕರಣ ಕೊಡುವ ಅನಿವಾರ್ಯತೆ ಇಲ್ಲ. ಅದರ ಬಗ್ಗೆ ನಾನು ಹೆಚ್ಚು ಏನು ಹೇಳಲ್ಲ ಎಂದಿದ್ದರು. ಇದನ್ನೂ ಓದಿ:ಮೂಗು ಚುಚ್ಚಿಸಿಕೊಂಡ ಪತ್ನಿ ಸಂಗೀತಾ ಲುಕ್‌ಗೆ ‘ಭಾಗ್ಯಲಕ್ಷ್ಮಿ’ ನಟ ಏನಂದ್ರು ಗೊತ್ತಾ?

Tamannaah Bhatia 3

ಆದರೆ, ಇದೀಗ ಡೇಟಿಂಗ್ ಕುರಿತು ಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯ್ ವರ್ಮಾ ಜೊತೆ ತಾವು ಲವ್ ಮಾಡುತ್ತಿರುವ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ʻಲಸ್ಟ್ ಸ್ಟೋರಿ -2′ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾ ಸೆಟ್ನಲ್ಲಿ ಮೊದಲು ಭೇಟಿಯಾಗಿದ್ದರು. ಅಲ್ಲಿಂದ ಪ್ರಾರಂಭವಾದ ಇವರ ಸ್ನೇಹ ಬಳಿಕ ಪ್ರೀತಿಯಾಗಿದೆ ಎಂದು ಹೇಳಿದ್ದಾರೆ. ಅದರ ಮುಂದುವರೆದ ಭಾಗವಾಗಿ ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Tamannaah 4

ಪ್ರೇಮಿಗಳ ದಿನದಂದು ತಮನ್ನಾಗೆ ವಿಜಯ್ ವರ್ಮಾ ವಿಶೇಷವಾಗಿ ವಿಶ್ ಮಾಡಿದ್ದರು. ತನ್ನ ಪ್ರೇಮಿಯ ಜೊತೆಗಿನ ಫೋಟೋವನ್ನು ವಿಜಯ್ ವರ್ಮಾ ಶೇರ್ ಮಾಡಿದ್ದರು.  ವಿಜಯ್ ಅವರು ಕಾಲೊಂದರ ಫೋಟೋವನ್ನು ಶೇರ್ ಮಾಡಿ ಹಾರ್ಟ್ ಇಮೋಜಿ ಇರಿಸಿದ್ದರು. ಅದು ತಮನ್ನಾ ಕಾಲು ಎಂದು ಹೇಳಲಾಗಿತ್ತು. ತಮನ್ನಾ ಧರಿಸಿದ್ದ ಶೋ ಮತ್ತು ಜರ್ಕಿನ್ ಫೋಟೋಗಳನ್ನು ಶೇರ್ ಮಾಡಿ ಇದು ಪಕ್ಕಾ ತಮನ್ನಾ ಅವರ ಕಾಲು ಎಂದಿದ್ದರು.

 

ವಿಜಯ್ ವರ್ಮಾ ತಮ್ಮ ಪ್ರೀತಿಯ ವಿಷಯದಲ್ಲಿ ಸ್ಪಷ್ಟವಾಗಿದ್ದರೂ, ತಮನ್ನಾ ಮಾತ್ರ ಅದನ್ನು ಹೇಳಿಕೊಳ್ಳಲು ತಯಾರು ಇರಲಿಲ್ಲ. ಯಾರೇ ಕೇಳಿದರೂ ಅದನ್ನು ಗಾಸಿಪ್ ಎಂದು ತೇಲಿಸಿ ಬಿಡುತ್ತಿದ್ದರು. ಪ್ರಥಮ ಬಾರಿಗೆ ಪ್ರೀತಿಯ ವಿಚಾರವನ್ನು ಹಂಚಿಕೊಂಡಿದ್ದಾರೆ. ವಿಜಯ್ ಜೊತೆಗಿನ ಪ್ರೀತಿಯನ್ನು ಒಪ್ಪಿಕೊಂಡಿದ್ದಾರೆ. 

Share This Article