ಸ್ಯಾಂಡಲ್‍ವುಡ್, ಕಿರುತೆರೆಯಲ್ಲಿ ಮಿಂಚಿದ ನಟಿ ತೇಜಸ್ವಿನಿ ಪ್ರಕಾಶ್ ಅವರು ಹಸೆಮಣೆ ಏರುತ್ತಿದ್ದಾರೆ.
ತೇಜಸ್ವಿನಿ ಪ್ರಕಾಶ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ನಿನ್ನೆ ಅರಿಶಿಣ ಶಾಸ್ತ್ರವನ್ನು ಅದ್ಧೂರಿಯಾಗಿ ಮಾಡಲಾಗಿದೆ. ಕುಟುಂಬಸ್ಥರು, ಸಿನಿಮಾ ಕಲಾವಿದರು, ಆಪ್ತರು ಕೆಲವು ಶಾಸ್ತ್ರಗಳಲ್ಲಿ ಭಾಗಿಯಾಗಿದ್ದಾರೆ.
View this post on Instagram
ತೇಜಸ್ವಿನಿ ಅವರ ಅರಿಶಿಣ ಶಾಸ್ತ್ರದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ಶುಭ ಕೋರುತ್ತಿದ್ದಾರೆ. ಅರಿಶಿಣ ಶಾಸ್ತ್ರದಲ್ಲಿ ಸ್ಯಾಂಡಲ್‍ವುಡ್ ನಟಿ ಕಾರುಣ್ಯ ರಾಮ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಮದುವೆಯಲ್ಲಿ ಸಿನಿಮಾ ರಂಗದ ಹಲವು ಕಲಾವಿದರು ಭಾಗಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ
View this post on Instagram
ಈ ಹಿಂದೆ ಅವರು ಮಾತಾಡ್ ಮಾತಾಡ್ ಮಲ್ಲಿಗೆ, ಪ್ರೀತಿ ಏಕೆ ಭೂಮಿ ಮೇಲಿದೆ, ಅರಮನೆ ಮೊದಲಾದ ಕೆಲ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ, ತೆಲುಗು ಸೇರಿದಂತೆ ಒಟ್ಟು 22 ಚಿತ್ರಗಳಲ್ಲಿ ನಟಿಸಿದ್ದಾರೆ. ಬಿಗ್‍ಬಾಸ್ ಕಾರ್ಯಕ್ರಮದಲ್ಲಿಯೂ ಕಾಣಿಸಿಕೊಂಡಿದ್ದರು. ತೇಜಸ್ವಿನಿ ಪ್ರಕಾಶ್ ಅವರ ಮದುವೆ ಯಾವಾಗ ಎಲ್ಲಿ ಎನ್ನುವ ಮಾಹಿತಿ ತಿಳಿದು ಬರಬೇಕಿದೆ. ಇದನ್ನೂ ಓದಿ: ವರ್ಷಾಂತ್ಯಕ್ಕೆ ನಿರ್ದೇಶನದ ಹೊಸ ಪಯಣ ಮಾಡಲು ರೆಡಿಯಾಗುತ್ತಿದ್ದಾರೆ ಕೃಷ್ಣ ಅಜಯ್ ರಾವ್