ಕೆಲಸಕ್ಕಾಗಿ ಅಲೆಯುತ್ತಿದ್ದಾರಂತೆ ನಟಿ ಉರ್ಫಿ ಜಾವೇದ್

Public TV
1 Min Read
Urfi Javed

ವಿಚಿತ್ರ ವಿನ್ಯಾಸದ ಬಟ್ಟೆಗಳ ಮೂಲಕ ಫೇಮಸ್ ಆಗಿರುವ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ಉರ್ಫಿ ಜಾವೇದ್ (Urfi Javed) ಇದೀಗ ಕೆಲಸ ಹುಡುಕುತ್ತಿದ್ದಾರಂತೆ. ಈ ಮಾಹಿತಿಯನ್ನು ಸ್ವತಃ ಅವರೇ ಹಂಚಿಕೊಂಡಿದ್ದಾರೆ. ನಾನು ಫೇಮಸ್ ಆಗಿದ್ದೇನೆ, ಜನರು ನನ್ನನ್ನು ಗುರುತಿಸುತ್ತಾರೆ ಎಲ್ಲವೂ ನಿಜ. ಆದರೆ, ನನಗೆ ಕೆಲಸವಿಲ್ಲ (Work). ನನ್ನೊಂದಿಗೆ ಕೆಲಸ ಮಾಡಲು ಯಾರೂ ಒಪ್ಪುವುದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

Urfi Javed 1 1

ತಾವು ಕೆಲಸ ಮಾಡಲು ರೆಡಿಯಾಗಿದ್ದು, ತಮಗೆ ಯಾವುದೇ ಕೆಲಸ ಸಿಗುತ್ತಿಲ್ಲ ಎಂದು ಉರ್ಫಿ ಹೇಳಿಕೊಂಡಿದ್ದಾರೆ. ನಾನು ಕೆಲಸ ಮಾಡಲು ತಯಾರಿದ್ದರೂ, ನನ್ನೊಂದಿಗೆ ಕೆಲಸ ಮಾಡಲು ಯಾರೂ ಸಿದ್ದರಿಲ್ಲ. ಹಾಗಾಗಿ ನನಗೆ ಕೆಲಸ ಸಿಗುತ್ತಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ತಮಗಾಗಿ ಯಾರಾದರೂ ಕೆಲಸ ಸೃಷ್ಟಿ ಮಾಡಿದರೆ ಹೋಗುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ:ಕೊನೆಗೂ ತನ್ನ ಮಗುವಿನ ತಂದೆ ಬಗ್ಗೆ ಗುಟ್ಟು ರಟ್ಟು ಮಾಡಿದ ಇಲಿಯಾನಾ

urfi javed 2

ಈ ಹಿಂದೆ ಉರ್ಫಿಗಾಗಿ ಕಾಸ್ಟ್ಯೂಮ್ (Costume) ಡಿಸೈನ್ ಮಾಡುವವರು ಯಾರೂ ಇರಲಿಲ್ಲವಂತೆ. ಹಾಗಾಗಿಯೇ ತಮ್ಮ ಕಾಸ್ಟ್ಯೂಮ್ ಅನ್ನು ತಾವೇ ಡಿಸೈನ್ ಮಾಡಲು ಕಲಿತಿದ್ದಾರಂತೆ. ಇತ್ತ ಮನೆಯಲ್ಲೂ ಗೌರವವಿಲ್ಲ, ಬೀದಿಯಲ್ಲೂ ಇಲ್ಲ. ಈ ವಿಚಾರವಾಗಿ ತಮಗೆ ತುಂಬಾ ನೋವಾಗಿದೆ ಎಂದಿದ್ದಾರೆ ಉರ್ಫಿ.

 

ಕಾಸ್ಟ್ಯೂಮ್ ವಿಚಾರವಾಗಿಯೇ ಉರ್ಫಿ ಕೋರ್ಟ್ (ಕೋರ್ಟ್) ಮೆಟ್ಟಿಲು ಕೂಡ ಏರಿದ್ದಾರೆ. ಅರೆಬರೆ ಬಟ್ಟೆ ಹಾಕಿಕೊಂಡು ಬೀದಿಗೆ ಬಂದು ನಮ್ಮ ಸಂಸ್ಕೃತಿಯನ್ನು ಉರ್ಫಿ ಹಾಳು ಮಾಡುತ್ತಿದ್ದಾರೆ ಎಂದು ಹಲವರು ಇವರ ಮೇಲೆ ಪೊಲೀಸರಿಗೆ (Police) ದೂರು ನೀಡಿದ್ದರು. ಅನೇಕರು ತಮಗೆ ಸುಖಾಸುಮ್ಮನೆ ಕಿರುಕುಳು ನೀಡುತ್ತಿದ್ದಾರೆ ಎಂದು ಸ್ವತಃ ಉರ್ಫಿ ಅವರೇ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಇದೆಲ್ಲದರಿಂದ ಆಚೆ ಬರಲು ಉರ್ಫಿ ಕೆಲಸ ಹುಡುಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article