ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ (Urvashi Rautela) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಬಾತ್‌ರೂಮ್‌ನಲ್ಲಿ ಸ್ನಾನಕ್ಕಾಗಿ ಊರ್ವಶಿ ಬಟ್ಟೆ ಬಿಚ್ಚುತ್ತಿರುವ ವಿಡಿಯೋವೊಂದು ಲೀಕ್ ಆಗಿದೆ. ಈ ಕುರಿತು ನಟಿಯ ಪರ ಮತ್ತು ವಿರೋಧದ ಚರ್ಚೆ ಕೂಡ ಶುರುವಾಗಿದೆ. ಇದನ್ನೂ ಓದಿ:ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ: ಅನು ಪ್ರಭಾಕರ್

View this post on Instagram
ಇದೀಗ ಈ ವಿಚಾರದ ಬಗ್ಗೆ ನಟಿಯ ಮ್ಯಾನೇಜರ್ ಪ್ರತಿಕ್ರಿಯಿಸಿ, ಈ ರೀತಿಯ ವಿಡಿಯೋಗಳು ಹೇಗೆ ಲೀಕ್ ಆಗುತ್ತದೆ ಎಂಬುದು ಗೊತ್ತಿಲ್ಲ. ವಿಡಿಯೋನ ಸೋಷಿಯಲ್ ಮೀಡಿಯಾದಲ್ಲಿ ತೆಗೆದು ಹಾಕುವ ಪ್ರಯತ್ನದಲ್ಲಿದ್ದೇವೆ ಎಂದಿದ್ದಾರೆ. ಆದರೆ ವೈರಲ್ ಆಗುತ್ತಿರುವ ವಿಡಿಯೋವನ್ನು ಬ್ರೇಕ್ ಹಾಕೋಕೆ ಸಾಧ್ಯವಾಗುತ್ತಿಲ್ಲ ಎಂದು ಮಾತನಾಡಿದ್ದಾರೆ.
ಅಂದಹಾಗೆ, ಊರ್ವಶಿ ರೌಟೇಲಾ ತೆಲುಗು ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಕನ್ನಡದ ‘ಐರಾವತ’ ಸಿನಿಮಾದಲ್ಲಿ ದರ್ಶನ್‌ಗೆ ನಾಯಕಿಯಾಗಿ ನಟಿಸಿದ್ದಾರೆ.

