ಕನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಸದಾ ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಈಗ ಬಾಲಯ್ಯ ನಟನೆಯ 109ನೇ ಸಿನಿಮಾದ ಶೂಟಿಂಗ್‌ನಲ್ಲಿ ನಟಿ ಕಾಲಿಗೆ ಏಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ:ರಜನಿಕಾಂತ್ ನಟನೆಯ ಚಿತ್ರಕ್ಕೆ ‘ರತ್ನನ್ ಪ್ರಪಂಚ’ ನಟಿ ಎಂಟ್ರಿ
ಬಾಲಯ್ಯ (Balayya) ಹೊಸ ಸಿನಿಮಾದಲ್ಲಿ ಊರ್ವಶಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊವರ್ಶಿ ಕಾಲಿಗೆ ಪೆಟ್ಟಾಗಿದ್ದು, ಕೂಡಲೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯದ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಸಿಗಬೇಕಿದೆ. ಬಾಲಿವುಡ್ ಬೆಡಗಿಗೆ ಪೆಟ್ಟಾಗಿರುವ ವಿಷಯ ತಿಳಿದು ಅಭಿಮಾನಿಗಳು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುತ್ತಿದ್ದಾರೆ.
ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದು, ಬಾಬಿ ಡಿಯೋಲ್ ವಿಲನ್ ಆಗಿ ಅಬ್ಬರಿಸುತ್ತಿದ್ದಾರೆ. ನಟಿ ಚಾಂದಿನಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.