ಅಗ್ನಿಸಾಕ್ಷಿ, ಬಿಗ್ ಬಾಸ್ ಖ್ಯಾತಿಯ ವೈಷ್ಣವಿ ಗೌಡ (Vaishnavi Gowda) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗ್ರ್ಯಾಂಡ್ ಆಗಿ ನಟಿ ನಿಶ್ಚಿತಾರ್ಥ ಮಾಡಿಕೊಂಡು ಸರ್ಪ್ರೈಸ್ ಕೊಟ್ಟಿದ್ದಾರೆ. ಇದನ್ನೂ ಓದಿ:KGF 3 ಮೇಲಿನ ನಿಮ್ಮ ನಿರೀಕ್ಷೆಯನ್ನು ಸುಳ್ಳು ಮಾಡಲ್ಲ- ಗುಡ್ ನ್ಯೂಸ್ ಕೊಟ್ಟ ಹೊಂಬಾಳೆ ಸಂಸ್ಥೆ
ಬೆಂಗಳೂರಿನ ರೆಸಾರ್ಟ್‌ವೊಂದರಲ್ಲಿ ಏಪ್ರಿಲ್ 14ರಂದು ನಟಿ ವೈಷ್ಣವಿ ಗೌಡ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ಮದುವೆಯಾಗುತ್ತಿರೋ ವರ ಅನುಕೂಲ್ ಮಿಶ್ರಾ (Anukool Mishra) ಅವರು ಇಂಡಿಯನ್ ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಪೋಷಕರು ಮೆಚ್ಚಿದ ವರನೊಂದಿಗೆ ಖುಷಿಯಿಂದ ಹಸೆಮಣೆ ಏರಲು ನಟಿ ರೆಡಿಯಾಗಿದ್ದಾರೆ.

View this post on Instagram
ಬೆಳಗ್ಗೆ ನಡೆದ ಶಾಸ್ತ್ರದಲ್ಲಿ ಕ್ರೀಮ್ ಕಲರ್ ಬಣ್ಣದ ಉಡುಗೆಯಲ್ಲಿ ಇವರಿಬ್ಬರು ಕಾಣಿಸಿಕೊಂಡಿದ್ದರು. ಸಂಜೆ ನಡೆದ ಎಂಗೇಜ್‌ಮೆಂಟ್ ಕಾರ್ಯಕ್ರಮದಲ್ಲಿ ವೈಷ್ಣವಿ ಅವರು ಕ್ರೀಮ್ ಕಲರ್ ಗೌನ್‌ನಲ್ಲಿ ಮಿಂಚಿದ್ದರೆ, ಅನುಕೂಲ್ ಅವರು ಬ್ಲ್ಯಾಕ್ ಡ್ರೆಸ್ ಧರಿಸಿದ್ದಾರೆ.
View this post on Instagram
ನಟಿಯ ನಿಶ್ಚಿತಾರ್ಥ ಸಂಭ್ರಮಕ್ಕೆ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿ, ಚೈತ್ರಾ ವಾಸುದೇವನ್, ಪೂಜಾ ಲೋಕೇಶ್ ಸೇರಿದಂತೆ ‘ಸೀತಾ ರಾಮ’ ಸೀರಿಯಲ್ ತಂಡ ಕೂಡ ಭಾಗಿಯಾಗಿತ್ತು.


