ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇಂದಿರಾ ಕ್ಯಾಂಟೀನ್ ಭವಿಷ್ಯವೇನು ಎನ್ನುವ ಅನುಮಾನ ಕಾಡುತ್ತಿದೆ. ಈಗ ಇಂದಿರಾ ಕ್ಯಾಂಟೀನ್ ಹಾಲಿ ಗುತ್ತಿಗೆದಾರರ ಅವಧಿ ಮುಗಿದಿದ್ದು, ಬಿಬಿಎಂಪಿ ಇಂದಿರಾ ಕ್ಯಾಂಟೀನ್ ಆಹಾರ ವಿತರಣೇ ಸಂಬಂಧ ಟೆಂಡರ್ ಕರೆದಿದೆ.
Advertisement
ಹಾಲಿ ಶೆಫ್ ಟಾಕ್, ರಿಚರ್ಡ್ಸ್ ಸಂಸ್ಥೆಗಳು ಟೆಂಡರ್ ನಲ್ಲಿ ಭಾಗವಹಿಸಿದೆ. ವಿಶೇಷವೆಂದರೆ ಈ ಟೆಂಡರ್ ಗೆ ಅದಮ್ಯ ಚೇತನ ವತಿಯಿಂದಲೂ ಅರ್ಜಿ ಹಾಕಲಾಗಿದೆ. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಂಸ್ಥೆ ಟೆಂಡರ್ ನಲ್ಲಿ ಭಾಗವಹಿಸಿದ್ದು, ನಿಯಮ ಉಲ್ಲಂಘಿಸಿ ಗುತ್ತಿಗೆ ನೀಡುತ್ತಾರಾ ಎಂಬ ಅನುಮಾನ ಈಗ ಕಾಂಗ್ರೆಸ್ ವಲಯವನ್ನು ಕಾಡುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ತಪ್ಪದೇ ಟೆಂಡರ್ ವೇಳೆ ಪಾರದರ್ಶಕ ನಿಯಮ ಪಾಲಿಸಬೇಕು ಎಂದು ವಿರೋಧ ಪಕ್ಷ ನಾಯಕ ಅಬ್ದುಲ್ ವಾಜೀದ್ ಆಗ್ರಹಿಸಿದ್ದಾರೆ.
Advertisement
Advertisement
ಮುಂದಿನ 15 ದಿನಗಳಲ್ಲಿ ಟೆಂಡರ್ ಪತ್ರಗಳ ಪರಿಶೀಲನೆ ಮುಗಿಸಿ, ಯಾರಿಗೆ ಗುತ್ತಿಗೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಲಿದೆ. ಈ ಮಧ್ಯೆ ಮಾನವ ಸಂಪನ್ಮೂಲ ಎಂಬ ಸಂಸ್ಥೆಯೂ ಗುತ್ತಿಗೆಯಲ್ಲಿ ಭಾಗವಹಿಸಿದೆ. ಇಡೀ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಆಹಾರ ಪೂರೈಕೆಗೆ ಆಸಕ್ತಿ ತೋರಿ 8 ಮಂದಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ ಎಂದು ಬಿಬಿಎಂಪಿ ಮೇಯರ್ ಗೌತಮ್‍ಕುಮಾರ್ ಹೇಳಿದ್ದಾರೆ.