ನವದೆಹಲಿ: ಅದಾನಿ ಸಮೂಹದ ಕಂಪನಿಗಳ ವಿರುದ್ಧ ಹಿಂಡೆನ್‌ಬರ್ಗ್ (Hindenburg) ಸಂಶೋಧನಾ ವರದಿಯಲ್ಲಿನ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ (Supreme Court) ನೇಮಕ ಮಾಡಿದ ಸಮಿತಿ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.
ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ಒ.ಪಿ. ಭಟ್, ನ್ಯಾಯಮೂರ್ತಿ ಜೆ.ಪಿ. ದೇವಧರ್, ಕೆ.ವಿ. ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರ್ ಸುಂದರೇಶನ್ ಅವರನ್ನು ಒಳಗೊಂಡ ಸಮಿತಿಯನ್ನು ಸಿಜೆಐ ಡಿ.ವೈ. ಚಂದ್ರಚೂಡ್ (DY Chandrachud) ನೇತೃತ್ವದ ತ್ರಿ ಸದಸ್ಯ ಪೀಠ ಮಾರ್ಚ್‌ನಲ್ಲಿ ನೇಮಿಸಿತ್ತು. ಇಂದು ಸಮಿತಿ ವರದಿಯನ್ನು ಸಲ್ಲಿಸಿದ್ದು ಮೆ 12 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
Advertisement
Advertisement
ಅದಾನಿ ಕಂಪನಿಗಳಲ್ಲಿ ಅಕ್ರಮ ನಡೆದಿದೆಯೇ? ಷೇರುಗಳ ಮೌಲ್ಯ ಹೆಚ್ಚಿಸಲು ಕೃತಕ ಪ್ರಯತ್ನಗಳು ನಡೆದಿವೆಯೇ? ಸೆಬಿ ನಿಯಮಗಳ ಸೆಕ್ಷನ್ 19ರ ಉಲ್ಲಂಘನೆಯಾಗಿದೆಯೇ? ಹೂಡಿಕೆದಾರರ ರಕ್ಷಣೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಕೋರ್ಟ್ ಸಮಿತಿಗೆ ಸೂಚಿಸಿತ್ತು. ತನಿಖೆಯನ್ನು ನಡೆಸಿ ಎರಡು ತಿಂಗಳೊಳಗೆ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ವರದಿ ನೀಡಬೇಕು ಎಂದು ಕೋರ್ಟ್ ಆದೇಶಿಸಿತ್ತು. ಇದನ್ನೂ ಓದಿ: Karnataka Election 2023 Live – ರಾಜ್ಯದಲ್ಲಿ 1 ಗಂಟೆವರೆಗೆ 37.25% ಮತದಾನ
Advertisement
ಸೆಬಿ ಅಧ್ಯಕ್ಷರು ಎಲ್ಲಾ ಅಗತ್ಯ ಮಾಹಿತಿಯನ್ನು ತಜ್ಞರ ಸಮಿತಿಗೆ ಒದಗಿಸಬೇಕು. ಸಂಬಂಧಪಟ್ಟ ಕೇಂದ್ರ ಸರ್ಕಾರದ ಏಜೆನ್ಸಿಗಳು ಸಮಿತಿಯೊಂದಿಗೆ ಸಹಕರಿಸಬೇಕು ಕೋರ್ಟ್ ಸೂಚಿಸಿತ್ತು.
Advertisement
ಅದಾನಿ ಕಂಪನಿಗಳ ತನಿಖೆಗೆ ಸುಪ್ರೀಂ ಕೋರ್ಟ್ ಸಮಿತಿ ರಚಿಸಿದ್ದನ್ನು ಗೌತಮ್ ಅದಾನಿ (Gautam Adani) ಸ್ವಾಗತಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು, ಸಮಯ ಕಳೆದಂತೆ ಪ್ರಕರಣ ತಾರ್ಕಿಕ ಅಂತ್ಯ ಕಾಣಲಿದೆ. ಸತ್ಯ ಮೇಲುಗೈ ಸಾಧಿಸಲಿದೆ ಎಂದು ಹೇಳಿದ್ದರು.
6 ತಿಂಗಳು ಬೇಕು:
ತನಿಖೆ ಪೂರ್ಣಗೊಳಿಸಲು ಕಾಲವಕಾಶದ ಅಗತ್ಯವಿದೆ. ಇನ್ನೂ ಆರು ತಿಂಗಳು ಅವಕಾಶ ವಿಸ್ತರಣೆಗೆ ಸೆಬಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದೆ. ಇದುವರೆಗೂ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಹಾಗೂ ಇದುವರೆಗೂ ತಿಳಿದು ಬಂದ ಅಂಶಗಳನ್ನು ತಜ್ಞರ ಸಮಿತಿಯ ಗಮನಕ್ಕೆ ತರಲಾಗಿದೆ. ಅಲ್ಲದೆ ಹಿಂಡೆನ್‍ಬರ್ಗ್ ವರದಿಯಲ್ಲಿ ತಿಳಿಸಿರುವ 12 ಶಂಕಾಸ್ಪದ ವರ್ಗಾವಣೆಗಳ ಕುರಿತು ಆಳವಾದ ತನಿಖೆ ನಡೆಸಬೇಕಿದೆ. ಆ ವರ್ಗಾವಣೆಗಳ ಮಾಹಿತಿಗಳು ಜಟಿಲವಾಗಿವೆ ಎಂದು ಸೆಬಿ ತನ್ನ ಮನವಿಯಲ್ಲಿ ತಿಳಿಸಿತ್ತು.